ನೇಪಾಳ-ಚೀನಾ ಗಡಿಯಲ್ಲಿ ಹಿಮ ಕುಸಿತ; ರಕ್ಷಣಾ ಕಾರ್ಯಾಚರಣೆ ಸ್ಥಗಿತ

ಕಠ್ಮಂಡು: ನೇಪಾಳ-ಚೀನಾ ಗಡಿಯಲ್ಲಿ ಸಂಭವಿಸಿದ ಹಿಮ ಕುಸಿತ ಹಾಗೂ ಭೀಕರ ಪ್ರವಾಹದ ಬಳಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ನೇಪಾಳ ಸರ್ಕಾರ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಟಿಬೆಟ್‌ನಲ್ಲಿ ನೀರಿನ ತಡೆಗೋಡೆ ಒಡೆದಿರುವ ಮಾಹಿತಿ ಹಿನ್ನೆಲೆಯಲ್ಲಿ ಮತ್ತೊಂದು ಭೀಕರ ಪ್ರವಾಹದ ಆತಂಕ ಎದುರಾಗಿದೆ. ಹೀಗಾಗಿ ರಕ್ಷಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಈ ದುರಂತದಲ್ಲಿ ಈವರೆಗೆ 472 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 1,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಹಿಮನದಿ ಕುಸಿತದಿಂದ ಹಿಮ, ಕೆಸರು ಹಾಗೂ ನೀರು ಏಕಾಏಕಿ ಹರಿದು ಈ ಭೀಕರ ದುರಂತ ಸಂಭವಿಸಿದೆ ಎನ್ನಲಾಗಿದೆ.

ಇದೇ ವೇಳೆ, ಟಿಬೆಟ್‌ನ ಗೈರಾಂಗ್‌ನಲ್ಲಿ ಪ್ರವಾಹದ ಅಪಾಯ ಹೆಚ್ಚಿದ ಹಿನ್ನೆಲೆಯಲ್ಲಿ ಚೀನಾವೂ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ನೇಪಾಳದ ತ್ರಿಶೂಲಿ-3ಎ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯ ಮುಂದುವರಿದಿದೆ. ಸುಮಾರು 350 ಕಾರ್ಮಿಕರು ಹಾಗೂ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಇನ್ನೂ 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ಇದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!