“ಗ್ಯಾನೇಶ್ ಇದ್ದಿದ್ದರೆ ಟ್ರಂಪ್‌ಗೆ ಈ ಸ್ಥಿತಿ ಬರುತ್ತಿರಲಿಲ್ಲ” – ಅಭಿಜಿತ್ ದೀಪ್ಕೆ ವ್ಯಂಗ್ಯ

ನವದೆಹಲಿ: ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷಕ್ಕೆ ಭಾರೀ ಹಿನ್ನಡೆ ನೀಡಿರುವ ಡೆಮಾಕ್ರಟಿಕ್ ಪಕ್ಷ, ಟೆಕ್ಸಾಸ್ ಮತ್ತು ಕಾನ್ಸಾಸ್‌ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ದಶಕಗಳಿಂದ ರಿಪಬ್ಲಿಕನ್ ಪಕ್ಷದ ಭದ್ರಕೋಟೆಗಳಾಗಿದ್ದ ಈ ಎರಡೂ ರಾಜ್ಯಗಳ ಸೆನೆಟ್ ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಡೆಮಾಕ್ರಾಟ್‌ಗಳು ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ಈ ಬೆಳವಣಿಗೆಯನ್ನು ಉಲ್ಲೇಖಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ವ್ಯಂಗ್ಯವಾಡಿದ್ದಾರೆ. “ಗ್ಯಾನೇಶ್ ಇದ್ದಿದ್ದರೆ ಟ್ರಂಪ್‌ಗೆ ಇಂತಹ ಪರಿಸ್ಥಿತಿ ಎಂದಿಗೂ ಬರುತ್ತಿರಲಿಲ್ಲ” ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವಿಚಾರವಾಗಿ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಭಿಜಿತ್ ದೀಪ್ಕೆ ಈ ರೀತಿಯ ವ್ಯಂಗ್ಯವಾಡಿದ್ದಾರೆ. ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಲು ಚುನಾವಣಾ ಆಯೋಗ ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಅಮೆರಿಕದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಸಿಜೆಪಿ ನಾಯಕ ಅಶುತೋಷ್ ರಾಂಕಾ ಮಾಡಿದ್ದ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಅಭಿಜಿತ್ ದೀಪ್ಕೆ, ಜನರು ಇದೀಗ ದ್ವೇಷದ ರಾಜಕೀಯದ ವಿರುದ್ಧ ಮತ ಚಲಾಯಿಸುತ್ತಿದ್ದಾರೆ ಎಂದು ಬರೆದಿದ್ದಾರೆ.ಇದೇ ವೇಳೆ, ಅಮೆರಿಕದ ಸೆನೆಟ್ ಮತ್ತು ಜನಪ್ರತಿನಿಧಿಗಳ ಸಭೆ ಎರಡರಲ್ಲೂ ಡೆಮಾಕ್ರಟಿಕ್ ಪಕ್ಷ ಗಮನಾರ್ಹ ಗೆಲುವು ಸಾಧಿಸಿದೆ. ರಿಪಬ್ಲಿಕನ್ ಪಕ್ಷದ ಪ್ರಬಲ ನೆಲೆಗಳಲ್ಲಿಯೇ ಸೋಲು ಎದುರಾಗಿರುವುದು ಟ್ರಂಪ್ ನೇತೃತ್ವದ ಪಕ್ಷಕ್ಕೆ ದೊಡ್ಡ ರಾಜಕೀಯ ಹಿನ್ನಡೆಯಾಗಿ ಪರಿಣಮಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!