
ಬರ್ಲಿನ್ :ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಅಧೀನದ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (MIT) ಪ್ರಾಧ್ಯಾಪಕ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರು ರಚಿಸಿರುವ ‘ಎನ್ವಿರಾನ್ಮೆಂಟಲ್ ಸ್ಟಡೀಸ್ ಆ್ಯಂಡ್ ಡಿಸಾಸ್ಟರ್ ಮ್ಯಾನೇಜ್ಮೆಂಟ್’ (ಪರಿಸರ ಅಧ್ಯಯನ ಮತ್ತು ವಿಪತ್ತು ನಿರ್ವಹಣೆ) ಪಠ್ಯಪುಸ್ತಕದ ಎರಡನೇ ಆವೃತ್ತಿಯನ್ನು ಜರ್ಮನಿಯ ಬರ್ಲಿನ್ನ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನ.6ರಂದು ಬಿಡುಗಡೆಗೊಳಿಸಲಾಯಿತು.

ಬರ್ಲಿನ್ನ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ GICITE 2026 ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿ (NEP-2020) ಮಾರ್ಗಸೂಚಿಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಈ ಪಠ್ಯಪುಸ್ತಕವು ಪರಿಸರ ಅಧ್ಯಯನ ಮತ್ತು ವಿಪತ್ತು ನಿರ್ವಹಣೆಯ ಕುರಿತಾದ ವಿಷಯಗಳನ್ನು ಒಳಗೊಂಡಿದೆ.

ಅಂತಾರಾಷ್ಟ್ರೀಯ ಶೈಕ್ಷಣಿಕ ವೇದಿಕೆಯಲ್ಲಿ ಪುಸ್ತಕದ ಎರಡನೇ ಆವೃತ್ತಿ ಬಿಡುಗಡೆಯಾಗಿರುವುದು ಮಣಿಪಾಲದ ಶೈಕ್ಷಣಿಕ ಕ್ಷೇತ್ರಕ್ಕೆ ಹೆಮ್ಮೆಯ ಸಾಧನೆಯಾಗಿದ್ದು, ಪರಿಸರ ಸಂರಕ್ಷಣೆ ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ಮತ್ತು ಜ್ಞಾನವರ್ಧನೆಗೆ ಈ ಕೃತಿ ಸಹಕಾರಿಯಾಗಲಿದೆ.


