ಟೆಹ್ರಾನ್: ಕುವೈತ್ನಲ್ಲಿ ಇಬ್ಬರು ಇಟಲಿ ಪ್ರಜೆಗಳ ಸಾವಿಗೆ ಕಾರಣವಾದ ಡ್ರೋನ್ ದಾಳಿಯ ಹಿಂದೆ ಇರಾನ್ ಕೈವಾಡವಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಅರಾಘ್ಚಿ ಅವರು ಇಟಲಿ ಮತ್ತು ಕುವೈತ್ ವಿದೇಶಾಂಗ ಸಚಿವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಯುದ್ಧವನ್ನು ಮತ್ತೆ ಆರಂಭಿಸುವ ಉದ್ದೇಶದಿಂದ ಪೂರ್ವಯೋಜಿತವಾಗಿ ರೂಪಿಸಲಾದ ಸಂಚಿನ ಭಾಗವಾಗಿರಬಹುದು ಎಂದು ಅರಾಘ್ಚಿ ತಮ್ಮ ಎಕ್ಸ್ (X) ಖಾತೆಯ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಅಮೆರಿಕವನ್ನು ಮತ್ತೊಮ್ಮೆ ಯುದ್ಧಕ್ಕೆ ಎಳೆದು ತರುವ ಉದ್ದೇಶದಿಂದ ಇಸ್ರೇಲ್ ಉದ್ದೇಶಪೂರ್ವಕವಾಗಿ ಉದ್ವಿಗ್ನತೆ ಸೃಷ್ಟಿಸುತ್ತಿದೆ ಎಂದೂ ಅವರು ಆರೋಪಿಸಿದ್ದಾರೆ.

