‘ಭಾರತ ಯಾರ ಮುಂದೆಯೂ ಅವಮಾನಕ್ಕೊಳಗಾಗಲು ಬಿಡಲ್ಲ’- ರಷ್ಯಾ ಅಧ್ಯಕ್ಷ ಪುಟಿನ್

ಮಾಸ್ಕೋ, ಅ. 03: ಭಾರತ ಯಾರ ಮುಂದೆಯೂ ಅವಮಾನಕ್ಕೊಳಗಾಗಲು ರಷ್ಯಾ ಬಿಡುವುದಿಲ್ಲ ಎಂದು ಅಮೆರಿಕಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟಾಂಗ್ ನೀಡಿದ್ದಾರೆ.

ಸೋಚಿಯಲ್ಲಿ ನಡೆದ ವಾಲ್ಡೈ ಚರ್ಚಾ ಕ್ಲಬ್‌ನ ಸಮಗ್ರ ಅಧಿವೇಶನದಲ್ಲಿ ಮಾತನಾಡಿದ ಪುಟಿನ್, “ಪ್ರಧಾನಿ ನರೇಂದ್ರ ಮೋದಿ ಅವರು ಸಮತೋಲಿತ ಮತ್ತು ಬುದ್ಧಿವಂತ ನಾಯಕ. ಭಾರತವು ರಷ್ಯಾದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದು ಆರ್ಥಿಕ ಲೆಕ್ಕಾಚಾರ ಅಷ್ಟೆ. ಇಲ್ಲಿ ಯಾವುದೇ ರಾಜಕೀಯ ಅಂಶವಿಲ್ಲ. ಭಾರತ ನಮ್ಮ ಇಂಧನ ಪೂರೈಕೆಗಳನ್ನು ನಿರಾಕರಿಸಿದರೆ, ಅದು ಕೆಲವು ನಷ್ಟಗಳನ್ನು ಅನುಭವಿಸುತ್ತದೆ. ಅಂದಾಜುಗಳು ಬದಲಾಗುತ್ತವೆ” ಎಂದು ರಷ್ಯಾದ ಕಚ್ಚಾ ತೈಲ ವ್ಯಾಪಾರವನ್ನು ನಿಲ್ಲಿಸುವಂತೆ ಭಾರತದ ಮೇಲೆ ಒತ್ತಡ ಹೇರಲು ಅಮೆರಿಕ ಪ್ರಯತ್ನಿಸುತ್ತಿರುವುದನ್ನು ಟೀಕಿಸಿದ್ದಾರೆ.

“ಭಾರತದಂತಹ ದೇಶದ ಜನರು ನನ್ನನ್ನು ನಂಬಿರಿ. ರಾಜಕೀಯ ನಾಯಕತ್ವವು ತೆಗೆದುಕೊಳ್ಳುವ ನಿರ್ಧಾರಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಯಾರ ಮುಂದೆಯೂ ಯಾವುದೇ ಅವಮಾನವನ್ನು ಎಂದಿಗೂ ಸಹಿಸಲ್ಲ. ನನಗೆ ಪ್ರಧಾನಿ ಮೋದಿ ಗೊತ್ತು. ಅವರು ಸ್ವತಃ ಈ ರೀತಿಯ ಯಾವುದೇ ಕ್ರಮಗಳನ್ನು ಎಂದಿಗೂ ತೆಗೆದುಕೊಳ್ಳುವುದಿಲ್ಲ” ಎಂದಿದ್ದಾರೆ.”ಅಮೆರಿಕದ ದಂಡನಾತ್ಮಕ ಸುಂಕಗಳಿಂದಾಗಿ ಭಾರತ ಎದುರಿಸುತ್ತಿರುವ ನಷ್ಟಗಳನ್ನು ರಷ್ಯಾದಿಂದ ಕಚ್ಚಾ ತೈಲ ಆಮದುಗಳಿಂದ ಸಮತೋಲನಗೊಳಿಸಲಾಗುತ್ತದೆ. ಜೊತೆಗೆ ಅದು ಸಾರ್ವಭೌಮ ರಾಷ್ಟ್ರವಾಗಿ ಪ್ರತಿಷ್ಠೆಯನ್ನು ಪಡೆಯುತ್ತದೆ” ಎಂದು ಹೇಳಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!