ರಾಕೇಶ್‌ ಪೂಜಾರಿ ನಿವಾಸಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ : ತಾಯಿ, ತಂಗಿಗೆ ಸಾಂತ್ವನ ಹೇಳಿದ ನಟ

ಇತ್ತೀಚೆಗಷ್ಟೇ ನಿಧನರಾದ ʻಕಾಮಿಡಿ ಕಿಲಾಡಿʼ ಸೀಸನ್‌ 3 ವಿನ್ನರ್‌, ಕನ್ನಡದ ಕಿರುತೆರೆಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ (Rakesh Poojary) ಅವರ ನಿವಾಸಕ್ಕೆ ಡಿವೈನ್‌ ನಟ ರಿಷಭ್‌ ಶೆಟ್ಟಿ ದಂಪತಿ ಭೇಟಿ ನೀಡಿದ್ದಾರೆ.


ರಿಷಬ್ ಶೆಟ್ಟಿ ಹಾಗೂ ಪ್ರಗತಿ ರಿಷಬ್ ಶೆಟ್ಟಿ ಅವರು ಇಂದು ಭೇಟಿ ನೀಡಿ ರಾಕೇಶ್ ಅವರ ತಾಯಿ ಮತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ರಾಕೇಶ್‌ ತಂಗಿ ಮದುವೆಗೂ ಆರ್ಥಿಕ ಸಹಾಯ ಮಾಡಿದ್ದಾರೆ. ಮುಂದಿನ ದಿನದಲ್ಲಿ ನಿರ್ಮಾಣವಾಗುವ ರಾಕೇಶ್‌ನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿ ಸದಾಕಾಲ ಕುಟುಂಬದೊಂದಿಗೆ ನಾನಿದ್ದೇನೆ ಎನ್ನುವ ಭರವಸೆಯನ್ನೂ ರಿಷಭ್‌ ಶೆಟ್ಟಿ ನೀಡಿದ್ದಾರೆ.

ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ 34 ವರ್ಷದ ರಾಕೇಶ್ ಪೂಜಾರಿ ಕಳೆದ ಮೇ 12ರ ಬೆಳಗ್ಗಿನ ಜಾವ 3:30ರ ವೇಳೆಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಸಾವಿಗೂ ಮುನ್ನ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ ಮುಗಿದ ಬಳಿಕ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿ ನಿಧನ ಹೊಂದಿದ್ದರು.


ಕಾಂತಾರ ಚಾಪ್ಟರ್ 1’ ಶೂಟಿಂಗ್ ಮುಗಿಸಿಕೊಟ್ಟಿದ್ದ ರಾಕೇಶ್:
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಕಿರುತೆರೆಯಲ್ಲಿ ಅಲ್ಲದೇ ಹಿರಿತೆರೆಯಲ್ಲಿಯೂ ಆಕ್ಟೀವ್ ಆಗಿದ್ದರು. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರಲ್ಲಿ ರಾಕೇಶ್ ನಟಿಸಿದ್ದು, ತಮ್ಮ ಪಾತ್ರದ ಶೂಟಿಂಗ್ ಕೂಡ ಮುಗಿಸಿ ಕೊಟ್ಟಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!