ಉಡುಪಿ: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು. ಮಠದ ವತಿಯಿಂದ ನಟನನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಪರ್ಯಾಯ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದರನ್ನು ಭೇಟಿಯಾಗಿ ಕೋಟಿಗೀತಾಲೇಖನಯಜ್ಞ ದೀಕ್ಷೆ ಸ್ವೀಕರಿಸಿದರು.ಶ್ರೀಗಳು ಅನುಗ್ರಹ ಮಂತ್ರಾಕ್ಷತೆ ನೀಡಿದ ಬಳಿಕ ಅನ್ನ ಪ್ರಸಾದ ಸೇವಿಸಿ ತೆರಳಿದರು.