ಭಾರತ-ಬಾಂಗ್ಲಾದೇಶ ಗಡಿ ಭದ್ರತೆಗೆ ಹೊಸ ಸರ್ಕಾರದ ಬಿಗಿ ಕ್ರಮ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಗಡಿ ಭದ್ರತೆಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ Suvendu Adhikari ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾರತ–ಬಾಂಗ್ಲಾದೇಶ ಅಂತರಾಷ್ಟ್ರೀಯ ಗಡಿಯಲ್ಲಿ ಫೆನ್ಸಿಂಗ್ ಕಾಮಗಾರಿಗಾಗಿ ಗಡಿ ಭದ್ರತಾ ಪಡೆಗೆ (ಬಿಎಸ್ಎಫ್) ಸುಮಾರು 105 ಎಕರೆ ಭೂಮಿಯನ್ನು ಹಸ್ತಾಂತರಿಸಲು ಸಂಪುಟ ಅನುಮೋದನೆ ನೀಡಿದೆ.


ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಮೇ 11ರಿಂದ ಭೂ ಹಸ್ತಾಂತರ ಪ್ರಕ್ರಿಯೆ ಆರಂಭವಾಗಲಿದ್ದು, 45 ದಿನಗಳೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಅಕ್ರಮ ನುಸುಳುಕೋರರನ್ನು ತಡೆಯಲು ಹಾಗೂ ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸಲು ಈ ಕ್ರಮ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಗಡಿ ಬೇಲಿ ನಿರ್ಮಾಣ ಪ್ರಕ್ರಿಯೆ ವಿಳಂಬಗೊಂಡಿತ್ತು ಎಂದು ಆರೋಪಿಸಿದ ಅವರು, ಪ್ರಸ್ತುತ ಸರ್ಕಾರ ಗಡಿ ಭದ್ರತೆಯ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.


ಇದೇ ವೇಳೆ, ಕೇಂದ್ರ ಸರ್ಕಾರದ ಹಲವು ಪ್ರಮುಖ ಯೋಜನೆಗಳಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ. Ayushman Bharat ಆರೋಗ್ಯ ಯೋಜನೆ, Pradhan Mantri Ujjwala Yojana 3.0 ಸೇರಿದಂತೆ ವಿವಿಧ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ವಯೋಮಿತಿಯಲ್ಲಿ ಐದು ವರ್ಷಗಳ ಸಡಿಲಿಕೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಜೊತೆಗೆ, Bharatiya Nyaya Sanhita (ಬಿಎನ್‌ಎಸ್) ಜಾರಿಗೆ ತರಲು ಹಾಗೂ ಜೂನ್ 2025ರ ಜನಗಣತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ಅನುಮೋದನೆ ನೀಡಲಾಗಿದೆ.ಹೊಸ ಕ್ರಿಮಿನಲ್ ಕಾನೂನುಗಳನ್ನು ರಾಜ್ಯದಲ್ಲಿ ತಕ್ಷಣದಿಂದಲೇ ಜಾರಿಗೆ ತರಲು ಸರ್ಕಾರ ನಿರ್ಧರಿಸಿದ್ದು, ಮುಂದಿನ ಸಚಿವ ಸಂಪುಟ ಸಭೆ ಮುಂದಿನ ವಾರ ನಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!