ಭಾರತದ ಅತೀ ವೇಗದ ಓಟಗಾರನಾದ ಪಂಜಾಬ್ ಅಥ್ಲೀಟ್: 100 ಮೀಟರ್ ಓಟದಲ್ಲಿ ಹೊಸ ರಾಷ್ಟ್ರೀಯ ದಾಖಲೆ

ರಾಂಚಿ: ಭಾರತೀಯ ಅಥ್ಲೆಟಿಕ್ಸ್ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯುವ ಮೂಲಕ ಪಂಜಾಬ್‌ನ ಓಟಗಾರ ಗುರ್ವಿಂದರ್ ಸಿಂಗ್ ಸಂಚಲನ ಮೂಡಿಸಿದ್ದಾರೆ. 2026ರ ರಾಷ್ಟ್ರೀಯ ಅಥ್ಲೆಟಿಕ್ಸ್ ಸೀಮೆಷನ್ ಕಪ್‌ನ ಪುರುಷರ 100 ಮೀಟರ್ ಓಟದಲ್ಲಿ ಅವರು ಚಿನ್ನದ ಪದಕ ಗೆದ್ದು ಹೊಸ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾರೆ.

ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಕಪ್ 2026 ಸ್ಪರ್ಧೆಯಲ್ಲಿ ಗುರ್ವಿಂದರ್ ಸಿಂಗ್ ಕೇವಲ 10.09 ಸೆಕೆಂಡುಗಳಲ್ಲಿ 100 ಮೀಟರ್ ಓಟವನ್ನು ಪೂರ್ಣಗೊಳಿಸಿ ಭಾರತದ ಅತೀ ವೇಗದ ಓಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಬಿರ್ಸಾ ಮುಂಡಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸ್ಪರ್ಧೆಯಲ್ಲಿ ಅವರ ಅದ್ಭುತ ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಈ ಮೂಲಕ ಅವರು ಏಷ್ಯಾದ ಎರಡನೇ ಅತೀ ವೇಗದ ಓಟಗಾರ ಎಂಬ ಗೌರವಕ್ಕೂ ಪಾತ್ರರಾಗಿದ್ದರು, ಕಾಮನ್ವೆಲ್ತ್ ಹಾಗೂ ಏಷ್ಯನ್ ಕ್ರೀಡಾಕೂಟಗಳಿಗೆ ಅರ್ಹತೆ ಪಡೆದಿದ್ದಾರೆ.

ಗುರ್ವಿಂದರ್ ಸಿಂಗ್, ಈ ಹಿಂದೆ ಅನಿಮೇಶ್ ಕುಜೂರ್ ಹೆಸರಿನಲ್ಲಿ ರಾಷ್ಟ್ರೀಯ ದಾಖಲೆಯನ್ನು ಮುರಿದು ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಭಾರತೀಯ ಕ್ರೀಡಾ ವಲಯದಲ್ಲಿ ಕ್ರಿಕೆಟ್ ಪ್ರಾಬಲ್ಯ ಮುಂದುವರಿದಿರುವ ನಡುವೆಯೂ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ರಾಷ್ಟ್ರೀಯ ದಾಖಲೆ ನಿರ್ಮಾಣವಾಗಿರುವುದು ವೈದ್ಯರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಗುರ್ವಿಂದರ್ ಸಿಂಗ್ ಯುವ ಅಥ್ಲೀಟ್‌ಗಳಿಗೆ ಸ್ಫೂರ್ತಿಯಾಗಲಿದೆ ಎಂದು ಕ್ರೀಡಾಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ

SHARE
Loading spinner

Leave a Reply

Your email address will not be published. Required fields are marked *

error: Content is protected !!