ರಾಯಗಡದಲ್ಲಿ ಪ್ರವಾಹದ ಆರ್ಭಟ: ಸಾವಿರಾರು ಗ್ಯಾಸ್ ಸಿಲಿಂಡರ್‌ಗಳು ನದಿಯಲ್ಲಿ

ಮುಂಬಯಿ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಸುಮಾರು 3,000 ಗ್ಯಾಸ್ ಸಿಲಿಂಡರ್‌ಗಳು ಪ್ರವಾಹದ ನೀರಿಗೆ ಕೊಚ್ಚಿಹೋಗಿ ಪಾತಳಗಂಗಾ ನದಿಯಲ್ಲಿ ತೇಲುತ್ತಿರುವ ಘಟನೆ ನಡೆದಿದೆ.

ನಿರಂತರ ಮಳೆಯಿಂದ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿದ್ದ ಘಟಕದ ತಡೆಗೋಡೆ ಕುಸಿದ ಪರಿಣಾಮ, ಪ್ರವಾಹದ ನೀರು ಒಳನುಗ್ಗಿ ಸಾವಿರಾರು ಸಿಲಿಂಡರ್‌ಗಳು ನದಿಗೆ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ಸಿಲಿಂಡರ್‌ಗಳಲ್ಲಿ ಗ್ಯಾಸ್ ತುಂಬಿರುವ ಸಾಧ್ಯತೆ ಇರುವುದರಿಂದ, ಅವುಗಳನ್ನು ಯಾರೂ ಮನೆಗೆ ತೆಗೆದುಕೊಂಡು ಹೋಗಬಾರದು ಹಾಗೂ ಕಂಡುಬಂದರೆ ತಕ್ಷಣವೇ ಅಧಿಕಾರಿಗಳಿಗೆ ಅಥವಾ ಸಂಬಂಧಿತ ಕಂಪನಿಗೆ ಒಪ್ಪಿಸುವಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದೆ.

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ರಾಯಗಡ ಸೇರಿದಂತೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!