ಅಗರ್ತಲಾ: ತ್ರಿಪುರಾ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಅನುರಾಗ್ ಧಂಕರ್ ಅವರು ಸೋಮವಾರ ಅಗರ್ತಲಾದ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಇದು ಆತ್ಮಹತ್ಯೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದರೂ, ಸಾವಿನ ನಿಖರ ಕಾರಣವನ್ನು ಅಧಿಕಾರಿಗಳು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತ್ರಿಪುರಾ ಮುಖ್ಯಮಂತ್ರಿ ಸೇರಿದಂತೆ ಹಿರಿಯ ಸರ್ಕಾರಿ ಅಧಿಕಾರಿಗಳು ಪೊಲೀಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಗರ್ತಲಾದ ಜಿಬಿ ಆಸ್ಪತ್ರೆಗೆ ರವಾನಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಸಾವಿನ ಕಾರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.


