ನೀಟ್ ಪ್ರತಿಭಟನೆ ಲಾಠಿಚಾರ್ಜ್: ಮೋದಿ ಕ್ಷಮೆ ಕೇಳಲಿ, ಅಮಿತ್ ಶಾ ರಾಜೀನಾಮೆ ನೀಡಲಿ – ರಾಹುಲ್ ಗಾಂಧಿ

ನವದೆಹಲಿ: ನೀಟ್ (NEET) ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ಖಂಡಿಸಿ ದೆಹಲಿಯಲ್ಲಿ ನಡೆದ ‘ಸಂಸತ್ ಚಲೋ’ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿಚಾರ್ಜ್ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಹಾಗೂ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಭಾರತೀಯ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದರು.

ಸಂಸತ್ತಿನಲ್ಲಿ ಈ ವಿಷಯದ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದ್ದಾಗಿ ತಿಳಿಸಿದ ಅವರು, ದೇಶದ ಶಿಕ್ಷಣ ಹಾಗೂ ಪರೀಕ್ಷಾ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ಸೋಮವಾರ ನಡೆದ ಪ್ರತಿಭಟನೆ ವೇಳೆ ಸಂಸತ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ಮಾಡಿದ್ದರು. ಗಾಯಗೊಂಡ ವಿದ್ಯಾರ್ಥಿಗಳನ್ನು ಭೇಟಿ ಮಾಡುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!