ಮೊಗ್ಡಂಪಲ್ಲಿ: ಸಂಗಾರೆಡ್ಡಿ ಜಿಲ್ಲೆಯ ಮೊಗ್ಡಂಪಲ್ಲಿ ಮಂಡಲದ ಸತ್ವಾರ್ ಗ್ರಾಮದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ತೈಲ ಟ್ಯಾಂಕರ್‌ವೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ವೇಳೆ ಆಟೋದಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ ಕರ್ನಾಟಕದ ಬೀದರ್ ಜಿಲ್ಲೆಯ ರಾಜಗಿರಾ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಇದೇ ವೇಳೆ ಸಂಗಾರೆಡ್ಡಿ ಜಿಲ್ಲೆಯ ಕೊಹಿರ್ ಮಂಡಲದ ಕವೇಲಿಯಲ್ಲಿ ಮೂರು ಕಾರುಗಳ ನಡುವೆ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ.

