ನವದೆಹಲಿ: ನೀಟ್ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅತಿಯಾದ ಬಲಪ್ರಯೋಗ ಮಾಡಿದ್ದಾರೆಂಬ ಆರೋಪ ಇದೀಗ ರಾಜಕೀಯ ಸಂಘರ್ಷಕ್ಕೆ ತಿರುಗಿದೆ.
ಘಟನೆಯನ್ನು ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾದರು. ಪ್ರತಿಭಟನೆಯಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾಹಿಲ್ ಲೋಚಬ್ ಕೂಡ ಅವರೊಂದಿಗೆ ತೆರಳಿದ್ದರು.

ಜುಲೈ 20ರಂದು ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲಪ್ರಯೋಗ ಹಾಗೂ ಪೆಲೆಟ್ ಗನ್ ಬಳಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿ ಎಫ್‌ಐಆರ್ ದಾಖಲಿಸುವಂತೆ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮುನ್ನ ಅವರು ಮಂದಿರ್ ಮಾರ್ಗ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸುವಂತೆ ಮನವಿ ಮಾಡಿದ್ದರು. ಆದರೆ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಬಳಿಕ ಕೇಂದ್ರ ವಿಭಾಗದ ಡಿಸಿಪಿಯನ್ನು ಭೇಟಿಯಾದ ರಾಹುಲ್ ಗಾಂಧಿ, ನಂತರ ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಗೆ ತೆರಳಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ದೂರು ಅಧಿಕೃತವಾಗಿ ಸ್ವೀಕರಿಸಿ ಪ್ರಕರಣ ದಾಖಲಿಸುವವರೆಗೆ ಪೊಲೀಸ್ ಠಾಣೆಯಲ್ಲೇ ಉಳಿದು ಒತ್ತಾಯ ಮುಂದುವರಿಸುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.



Best experience so far in the PH region. The games are fair and the customer support is actually helpful. Highly recommended for everyone! phjuan635