ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಬಾಂಬೆ ಹೈಕೋರ್ಟ್ ಆದೇಶಿಸಿದೆ.
ದಿಶಾ ಅವರ ತಂದೆ ಸತೀಶ್ ಸಾಲಿಯನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ ಪೀಠ ಈ ಆದೇಶ ನೀಡಿದೆ. ಮುಂಬೈ ಪೊಲೀಸರು ತನಿಖೆಯಲ್ಲಿ ಲೋಪ ಎಸಗಿದ್ದಾರೆ ಎಂದು ಕುಟುಂಬ ಆರೋಪಿಸಿತ್ತು.

ದಿಶಾ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂಬ ಶಂಕೆ ವ್ಯಕ್ತಪಡಿಸಿದ್ದ ಕುಟುಂಬ, ಎಫ್‌ಐಆರ್ ದಾಖಲಿಸದೇ ಆಕಸ್ಮಿಕ ಸಾವಿನ ಪ್ರಕರಣವೆಂದು ಪರಿಗಣಿಸಿರುವುದನ್ನು ಪ್ರಶ್ನಿಸಿತ್ತು.
ಪ್ರಕರಣದ ಎಲ್ಲಾ ಅಂಶಗಳನ್ನು ಪರಿಗಣಿಸಿದ ಹೈಕೋರ್ಟ್ ಇದೀಗ ಸಿಬಿಐ ತನಿಖೆಗೆ ಆದೇಶಿಸಿದೆ.


