
ನವದೆಹಲಿ: ಅರ್ನಬ್ ಚಂಡಮಾರುತದ ಅಬ್ಬರ ತಗ್ಗುತ್ತಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಹವಾಮಾನ ವ್ಯವಸ್ಥೆ ರೂಪುಗೊಂಡಿದ್ದು, ಹೊಸದಾಗಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಎದುರಾಗಿದೆ.

ದಕ್ಷಿಣ ಅಂಡಮಾನ್ ಸಮುದ್ರ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.

ಈ ಹವಾಮಾನ ವ್ಯವಸ್ಥೆಯು ಪಶ್ಚಿಮ-ವಾಯವ್ಯ ದಿಕ್ಕಿನಲ್ಲಿ ಚಲಿಸುತ್ತಿದ್ದು, ಅನುಕೂಲಕರ ಪರಿಸ್ಥಿತಿ ಮುಂದುವರಿದರೆ ವಾಯುಭಾರ ಕುಸಿತದ ಮುಂದಿನ ಹಂತವಾದ ಡಿಪ್ರೆಶನ್ ಆಗಿ ಬದಲಾಗುವ ಸಾಧ್ಯತೆಯಿದೆ.

ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳಲಿದೆ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಮುಂದಿನ ಕೆಲವು ದಿನಗಳ ಕಾಲ ಇದರ ಚಲನೆ ಮತ್ತು ತೀವ್ರತೆಯನ್ನು ಹವಾಮಾನ ಇಲಾಖೆ ಸೂಕ್ಷ್ಮವಾಗಿ ಗಮನಿಸಲಿದೆ.

