1೦ ವರ್ಷಗಳ ಭಯದ ರಾಜಕೀಯದ ಪ್ರತಿರೋಧ ; ಜನವರಿ 10, ವಿಮೆನ್ ಇಂಡಿಯಾ ಮೂವ್ಮೆಂಟ್ ಸಂಸ್ಥಾಪನಾ ದಿನಾಚರಣೆ

ಬಿಸಿರೋಡ್: ಸಂಸ್ಥಾಪನಾ ದಿನದ ಅಂಗವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬಂಟ್ವಾಳದ ಪರ್ಲಿಯಾದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿತು. ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಶಿನೀರ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ SIR ಕುರಿತಾಗಿ ಮಾಹಿತಿ ಶಿಬಿರ ಏರ್ಪಡಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಎಸ್ ಡಿ ಪಿ ಐ ಬಂಟ್ವಾಳ ವಿಧಾನ ಸಭಾ ಕಾರ್ಯದರ್ಶಿ ಅಕ್ಬರ್ ಅಲಿ ಮಿತ್ತಬೈಲ್ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ವಿಮ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಂ,
ವಿಮ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, ಹಾಗೂ , ವಿಮ್ ಮಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಝೀನತ್ ಗೂಡಿನ ಬಳಿ ಭಾಗವಹಿಸಿದರು.

ವಿಮ್ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷೆ ನುಸೈಬ ಕಲ್ಲಡ್ಕ ಸ್ವಾಗತಿಸಿದರು. ಸಮಿತಿ ಸದಸ್ಯೆ ರುಫೈದ ಧನ್ಯವಾದಗೈದರು. ಜಿಲ್ಲಾ ಸಮಿತಿ ಸದಸ್ಯೆ ಝೈಬುನ್ನಿಸ ಕಾರ್ಯಕ್ರಮ ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!