ಮಂಗಳೂರು ಹೊರವಲಯದ ಮೂಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬುವವರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.

ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ 29-04-2020ರಂದು ಆರೋಪಿ ಆಲ್ಫೋನ್ಸ್ ಸಲ್ದಾಣ, ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನನ್ನು ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಗಲಾಟೆ ಮಾಡಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದಾನೆ. ರಕ್ಷಿಸಲು ಧಾವಿಸಿ ಬಂದ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನ ಪತ್ನಿ ಹೆಲೆನ್ ಡಿಸೋಜಾ ಯಾನೆ ಹೆಲೆನ್ ರೋಸಿ ರೋಡ್ರಿಗಸ್ ಳನ್ನು ಅಟ್ಟಾಡಿಸಿ ಚೂರಿಯಿಂದ ಅಮಾನುಷವಾಗಿ ತಿವಿದು ಕೊಲೆ ಮಾಡಿದ್ದಾನೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 31/2020 ಕಲಂ 341, 504, 506, 302 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು, ಅಂದಿನ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಜಯರಾಮ ಡಿ. ಗೌಡ ಅವರು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದು ತನಿಖಾ ಸಹಾಯಕರಾಗಿ ಮುಲ್ಕಿ ಪೊಲೀಸ್ ಠಾಣೆಯ ಎಎಸ್ಐ ಉಮೇಶ್ ಕೆ ಹಾಗೂ ಹೆಚ್ ಸಿ. 725 ನೇ ವಾದಿರಾಜ ರವರು ತನಿಖಾ ಸಹಾಯಕರಾಗಿ ತನಿಖೆಗೆ ಸಹಕರಿಸಿದ್ದಾರೆ. ಈ ಪ್ರಕರಣವು ನ್ಯಾಯಾಲಯದಲ್ಲಿ ಎಸ್ ಸಿ ನಂಬ್ರ; 69/2020 ರಂತೆ ವಿಚಾರಣೆ ನಡೆದಿದ್ದು 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನರವರು ವಿಚಾರಣೆ ನಡೆಸಿ ಪ್ರಸ್ತುತ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಅರೋಪಿಗೆ ದಿನಾಂಕ: 19-01-2026 ರಂದು ಜೀವಾವಧಿ ಶಿಕ್ಷೆಯನ್ನು ವಿಧಿಸಿರುತ್ತಾರೆ. ಹಾಗೂ 2 ಲಕ್ಷ ರೂ ದಂಡ ವಿಧಿಸಿದ್ದಾರೆ. ಸಾಕ್ಷಿ ವಿಚಾರಣೆ ಸಮಯ ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ರವರು ಅಭಿಯೋಜನೆ ಪರ ವಾದ ಮಂಡಿಸಿದ್ದಾರೆ. ಮಾನ್ಯ ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆ ಸಮಯ ಮುಲ್ಕಿ ಪೊಲೀಸ್ ಠಾಣಾ ಮಪಿಸಿ 827ನೇ ಕಾವ್ಯಾರವರು ಸಹಕರಿಸಿದ್ದಾರೆ.ಮಂಗಳೂರು ಹೊರವಲಯದ ಮೂಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಫೋನ್ಸ್ ಸಲ್ದಾನ ಎಂಬುವವರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.

ಮುಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ 29-04-2020ರಂದು ಆರೋಪಿ ಆಲ್ಫೋನ್ಸ್ ಸಲ್ದಾಣ, ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನನ್ನು ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಗಲಾಟೆ ಮಾಡಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದಾನೆ. ರಕ್ಷಿಸಲು ಧಾವಿಸಿ ಬಂದ ವಿನ್ಸಿ ಯಾನೆ ವಿನ್ಸೆಂಟ್ ಡಿಸೋಜಾನ ಪತ್ನಿ ಹೆಲೆನ್ ಡಿಸೋಜಾ ಯಾನೆ ಹೆಲೆನ್ ರೋಸಿ ರೋಡ್ರಿಗಸ್ ಳನ್ನು ಅಟ್ಟಾಡಿಸಿ ಚೂರಿಯಿಂದ ಅಮಾನುಷವಾಗಿ ತಿವಿದು ಕೊಲೆ ಮಾಡಿದ್ದಾನೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 31/2020 ಕಲಂ 341, 504, 506, 302 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು, ಅಂದಿನ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಜಯರಾಮ ಡಿ. ಗೌಡ ಅವರು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದು ತನಿಖಾ ಸಹಾಯಕರಾಗಿ ಮುಲ್ಕಿ ಪೊಲೀಸ್ ಠಾಣೆಯ ಎಎಸ್ಐ ಉಮೇಶ್ ಕೆ ಹಾಗೂ ಹೆಚ್ ಸಿ. 725 ನೇ ವಾದಿರಾಜ ರವರು ತನಿಖಾ ಸಹಾಯಕರಾಗಿ ತನಿಖೆಗೆ ಸಹಕರಿಸಿದ್ದಾರೆ. ಈ ಪ್ರಕರಣವು ನ್ಯಾಯಾಲಯದಲ್ಲಿ ಎಸ್ ಸಿ ನಂಬ್ರ; 69/2020 ರಂತೆ ವಿಚಾರಣೆ ನಡೆದಿದ್ದು 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನರವರು ವಿಚಾರಣೆ ನಡೆಸಿ ಪ್ರಸ್ತುತ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ರವರು ಅರೋಪಿಗೆ ದಿನಾಂಕ: 19-01-2026 ರಂದು ಜೀವಾವಧಿ ಶಿಕ್ಷೆಯನ್ನು ವಿಧಿಸಿರುತ್ತಾರೆ. ಹಾಗೂ 2 ಲಕ್ಷ ರೂ ದಂಡ ವಿಧಿಸಿದ್ದಾರೆ. ಸಾಕ್ಷಿ ವಿಚಾರಣೆ ಸಮಯ ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ರವರು ಅಭಿಯೋಜನೆ ಪರ ವಾದ ಮಂಡಿಸಿದ್ದಾರೆ. ಮಾನ್ಯ ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆ ಸಮಯ ಮುಲ್ಕಿ ಪೊಲೀಸ್ ಠಾಣಾ ಮಪಿಸಿ 827ನೇ ಕಾವ್ಯಾರವರು ಸಹಕರಿಸಿದ್ದಾರೆ.

