ಕಡಬ: ಕಡಬ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ವತಿಯಿಂದ ಕಡಬ ತಾಲೂಕಿನ ವಿವಿಧೆಡೆ ಜನವರಿ ೨೫ ರಿಂದ ಫೆ ೧ ರ ತನಕ ಹಿಂದೂ ಸಂಗಮ ಕಾರ್ಯಕ್ರಮಗಳು ನಡೆಯಲಿವೆ ಎಂದು ಹಿಂದೂ ಸಂಗಮ ಆಯೋಜನ ಸಮಿತಿಯ ಅಧ್ಯಕ್ಷ ಹರಿರಾಮಚಂದ್ರ ಉಪ್ಪಿನಂಗಡಿ ಹೇಳಿದರು.
ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸಮಿತಿಯ ಯೋಜನೆಯಂತೆ ಕಡಬ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದು ಸಂಗಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಮೂರು ಅಥವಾ ನಾಲ್ಕು ಗ್ರಾಮಗಳನ್ನು ಒಳಗೊಂಡoತೆ ಒಂದು ಮಂಡಲ ಮಾಡಿ ಕಾರ್ಯಕ್ರಮ ನಡಸಲಾಗುವುದು. ಜನವರಿ ೨೫ ರಂದು ಕಡಬ ಜಯದುರ್ಗಾ ದೇವಸ್ಥಾನದ ವಠಾರದಲ್ಲಿ ಹಾಗೂ ರಾಮಕುಂಜದ ಗಣೇಶ ನಗರದಲ್ಲಿ, ಜನವರಿ ೨೬ ರಂದು ಮರ್ಧಾಳ ಅಯ್ಯಪ್ಪ ಭಜನಾ ಮಂದಿರದಲ್ಲಿ, ಫೆಬ್ರವರಿ ೧ ರಂದು ಆಲಂಕಾರು ದುರ್ಗಾಂಬಾ ಮೈದಾನದಲ್ಲಿ, , ನೆಲ್ಯಾಡಿ ಮಂಡಲದಿoದ ನೆಲ್ಯಾಡಿ ಗಾಂಧಿ ಮೈದಾನದಲ್ಲಿ, ಉದನೆ ಪರಶುರಾಮ ಮೈದಾನದಲ್ಲಿ. ಹಾಗೂ ಉಪ್ಪಿನಂಗಡಿ ಕಾಳಿಕಾಂಬಾ ದೇವಸ್ಥಾನದ ವಠಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲಾ ಕಡೆ ಮಧ್ಯಾಹ್ನ ಬಳಿಕ ಕಾರ್ಯಕ್ರಮ ನಡೆಯಲಿದ್ದು ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.
ಇದು ಸಮಾಜದೊಳಗಿನ ಶಕ್ತಿಗಳನ್ನು ಒಂದೇ ವೇದಿಕೆಗೆ ತರುವ, ಸಮಾಜವೇ ರೂಪಿಸಿ ಸಮಾಜವೇ ನಡೆಸುವ ಮಹತ್ವದ ಸಾಮಾಜಿಕ ಅಭಿಯಾನವಾಗಿದೆ. ಸಮಾಜದಲ್ಲಿ ಕೌಟುಂಬಿಕ ಮೌಲ್ಯಗಳು ಕ್ಷೀಣಿಸುತ್ತಿರುವುದರಿಂದ ಸಾಮಾಜಿಕ ಸಾಮರಸ್ಯಕ್ಕೆ ಸವಾಲುಗಳು ಎದುರಾಗುತ್ತಿವೆ. ಪರಿಸರ ಸಂರಕ್ಷಣೆಯ ಅಗತ್ಯ ತೀವ್ರವಾಗಿರುವುದು ಹಾಗೂ ಸ್ವಾವಲಂಬಿ ಸ್ವಾಭಿಮಾನಿ ಜೀವನ ಜೀವನ ಪದ್ಧತಿಯ ಅವಶ್ಯಕತೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಈ ಹಿಂದು ಸಂಗಮ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಸಮಾಜದಲ್ಲಿ ಜಾಗೃತಿ ಮೂಡಿಸಿ. ಸಕಾರಾತ್ಮಕ ಚಿಂತನೆ ಮತ್ತು ಕ್ರಿಯಾಶೀಲತೆಯನ್ನು ಬೆಳೆಸುವುದು, ಸಾಮಾಜಿಕ ಸೇವೆ, ಸಹಕಾರ, ಸ್ವಾವಲಂಬನೆ ಮತ್ತು ಸೇವಾಭಾವನೆಗಳನ್ನು ಉತ್ತೇಜಿಸುವ ಸಲುವಾಗಿ ಸಮಾಜದ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಸೇವಾ, ಕ್ರೀಡಾ, ಕಲಾ ಮತ್ತು ಸಹಕಾರಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ರೀತಿಯ ಸ್ವಯಂಸೇವಾ ಸಂಸ್ಥೆಗಳು, ಸಂಘಟನೆಗಳು ಹಾಗೂ ಸಮುದಾಯದ ಹಿರಿಯರು, ಯುವಕರು ಮತ್ತು ಮಹಿಳೆಯರು ಈ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಇದು ಸಮಾಜದ ಎಲ್ಲ ವರ್ಗಗಳನ್ನು ಒಟ್ಟುಗೂಡಿಸುವ ಸಮನ್ವಯದ ವೇದಿಕೆಯಾಗಲಿದೆ.
ಹಿಂದು ಸಂಗಮದ ಮೂಲಕ ಕೌಟುಂಬಿಕ ಮೌಲ್ಯಗಳ ಪುನರುತ್ಥಾನ, ಸಾಮಾಜಿಕ ಸಾಮರಸ್ಯದ ಜಾಗರಣೆ, ಪರಿಸರ ಸಂರಕ್ಷಣೆಯ ಸಂಕಲ್ಪ, ಸ್ವಾವಲಂಬಿ ಹಾಗೂ ಸ್ವಾಭಿಮಾನಿ ಜೀವನ ಪದ್ಧತಿ ಮತ್ತು ನಾಗರಿಕ ಕರ್ತವ್ಯಗಳ ಪಾಲನೆ ಎಂಬ ಆದರ್ಶಗಳನ್ನು ಜನಸಾಮಾನ್ಯರ ಬದುಕಿಗೆ ತಲುಪಿಸುವ ಪ್ರಯತ್ನ ನಡೆಯಲಿದೆ. ಕಳೆದ ಕೆಲವು ತಿಂಗಳುಗಳಿAದ ತಾಲೂಕು, ಮಂಡಲ ಮಟ್ಟದಲ್ಲಿ ವ್ಯಾಪಕ ಪೂರ್ವಸಿದ್ಧತೆಗಳು ನಡೆಯುತ್ತಿವೆ. ಸಮಾಜದ ಬಂಧುಗಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ತಾಲೂಕು ಆಯೋಜನಾ ಸಮಿತಿಯನ್ನು ಮಂಡಲದಲ್ಲಿ ಮಂಡಲ ನಿರ್ವಹಣಾ ತಂಡಗಳನ್ನು ರಚಿಸಲಾಗಿದ್ದು, ವಿವಿಧ ಸಂಘಟನೆಗಳು, ದೈವಸ್ಥಾನ ದೇವಾಲಯಗಳ ಭಜನಾ ಮಂದಿರಗಳ ಪ್ರಮುಖರು, ಸಾಮಾಜಿಕ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆಗಳು ನಡೆದಿವೆ. ಕಾರ್ಯಕ್ರಮಗಳ ಯಶಸ್ಸಿಗಾಗಿ ಸ್ವಯಂಸೇವಕರ ತಂಡಗಳನ್ನು ರೂಪಿಸಲಾಗಿದ್ದು, ಮನೆ ಮನೆ ಮಹಾ ಸಂಪರ್ಕ ಅಭಿಯಾನ, ಹಿಂದೂಸAಗಮ ಸಂಪರ್ಕ ಯಾತ್ರೆ ನಡೆಯುತ್ತಿವೆ. ಹಿಂದು ಸಂಗಮವು ಕೇವಲ ಒಂದು ದಿನದ ಕಾರ್ಯಕ್ರಮವಾಗದೆ, ಸಮಾಜದಲ್ಲಿ ದೀರ್ಘಕಾಲೀನ ಸಕಾರಾತ್ಮಕ ಪರಿಣಾಮ ಬೀರುವ ಚಳವಳಿಯಾಗಿ ರೂಪುಗೊಳ್ಳಬೇಕು ಎಂಬ ಆಶಯದೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಹರಿರಾಮಚಂದ್ರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಆಯೋಜನ ಸಮಿತಿಯ ಗೌರವಾಧ್ಯಕ್ಷ ಗೋಪಾಲಕೃಷ್ಣ ಪಡ್ಡಿಲ್ಲಾಯ, ಉಪಾಧ್ಯಕ್ಷ ಡಾ.ಸುರೇಶ್ ಕುಮಾರ್ ಕೂಡೂರು, ಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ, ಸಹಕೋಶಾಧಿಕಾರಿ ಗಾಯತ್ರಿ ಸುರೇಶ್ ಕುಂಡಡ್ಕ ಉಪಸ್ಥಿತರಿದ್ದರು.