ಮಂಗಳೂರು ನಗರದಲ್ಲಿ ಒಳಚರಂಡಿ ಸಮಸ್ಯೆ ಗಂಭೀರ – ಡಿಸಿ ಫೋನ್ ಇನ್‌ನಲ್ಲಿ ಬಹಿರಂಗ

ಮಂಗಳೂರು :ಮಳೆನೀರು ಚರಂಡಿಗೆ ಕೊಳಚೆ ನೀರು ಸೇರುವ ಬಗ್ಗೆ, ನಗರದ ಒಳಚರಂಡಿ ಅವ್ಯವಸ್ಥೆ ಬಗ್ಗೆ ಸರಣಿ ದೂರುಗಳು ಬುಧವಾರ ನಡೆದ ಮಂಗಳೂರಿನಲ್ಲಿ‌ ನಡೆದ ಜಿಲ್ಲಾಧಿಕಾರಿ ಫೋನ್ ಇನ್ ಕಾರ್ಯಕ್ರಮದಲ್ಲಿ‌‌ ಪ್ರಮುಖವಾಗಿ ಕೇಳಿ ಬಂದವು.

ಜಿಲ್ಲಾಧಿಕಾರಿ ಅಧ್ಯಕ್ಷತೆಯ ೧ ಗಂಟೆಯ ಫೋನ್ ಇನ್ ಕಾರ್ಯಕ್ರಮದಲ್ಲಿ ಮಳೆ ನೀರು ಚರಂಡಿಯಲ್ಲಿ ಫ್ಲಾಟ್, ಅಪಾರ್ಟ್ಮೆಂಟ್‌ಗಳ ಕೊಳಚೆ ನೀರು (ಒಳಚರಂಡಿ) ಹರಿದು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಹಲವು ದೂರುಗಳು ಸಲ್ಲಿಕೆಯಾಗಿವೆ.
ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ಬುಧವಾರ ಪಾಲಿಕೆಯ ಮೇಯರ್ ಕೊಠಡಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ, ಸುರತ್ಕಲ್ ಮುಕ್ಕದ ವಾರ್ಡ್ ನಂ. ೧ರ ಚರ್ಚ್ ಮುಂಭಾಗದ ತೆರೆದ ನೀರಿನ ಚರಂಡಿಯಲ್ಲಿ ಸಮೀಪದ ಫ್ಲಾಟ್‌ಗಳ ಕೊಳಚೆ ನೀರು ಬಿಡಲಾಗುತ್ತಿದೆ. ಈ ಬಗ್ಗೆ ಎರಡು ಮೂರು ಬಾರಿ ದೂರು ನೀಡಲಾಗಿದ್ದರೂ ಕ್ರಮ ಆಗಿಲ್ಲ. ಈ ಚರಂಡಿ ಸಮೀಪವೇ ಬಸ್ಸು ನಿಲ್ದಾಣವಿದೆ. ಸಾವಿರಾರು ಮಕ್ಕಳು, ನಾಗರಿಕರು ಈ ಬಸ್ಸು ನಿಲ್ದಾಣಕ್ಕೆ ಬರುವಾಗ ಈ ಕೊಳಚೆ ನೀರಿನ ತೊಂದರೆಯನ್ನು ಅನುಭವಿಸಬೇಕಾಗಿದೆ ಎಂದು ಫಾದರ್ ಸ್ಟಾನ್ಲಿ ಪಿಂಟೋ ಎಂಬವರು ದೂರಿದರು.
ಕೃಷ್ಣಾಪುರ ಮರಿಯಮ್ ಡಿಸೋಜಾ ಎಂಬವರು ಕರೆ ಮಾಡಿ, ಮಳೆ ನೀರು ತೋಡಿಗೆ ಕೊಳಚೆ ನೀರು ಬಿಡಲಾಗುತ್ತಿದೆ ಎಂದು ದೂರಿದರೆ, ಯೆಯ್ಯಾಡಿಯ ಸುಭಾಶಿನಿ ಭಟ್‌ರವರು, ಕದ್ರಿ ಪದವು ಬಳಿ ೪೦ ಮನೆಗಳಿಗ್ದು, ಪಾಲಿಕೆಯಿಂದ ಒಳಚರಂಡಿ ವ್ಯವಸ್ಥೆ ಮಾಡಲಾಗಿಲ್ಲ. ೨೦ ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಕ್ರಮ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುರತ್ಕಲ್ ಭಾಗದಲ್ಲಿ ಯುಜಿಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಸ್ಥಳೀಯರು ೨೫ ವರ್ಷಗಳಿಂದ ಈ ಬಗ್ಗೆ ಮನವಿ ಸಲ್ಲಿಸುತ್ತಿದ್ದಾರೆ ಎಂದು ನವೀನ್ ಬೈಕಂಪಾಡಿ ಎಂಬವರು ದೂರಿದರು.

ಈ ದೂರುಗಳಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಫ್ಲಾಟ್‌ಗಳು, ವಸತಿ ಸಮುಚ್ಚಯಗಳಿಗೆ ಒಳಚರಂಡಿ ನೀರು ಮಳೆ ನೀರು ಚರಂಡಿಗೆ ಹರಿಸದಿರುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು. ಈ ಬಗ್ಗೆ ಅಭಿಯಾನವನ್ನೂ ಮಂಗಳೂರು ನಗರ ಪಾಲಿಕೆಯಿಂದ ನಡೆಸಲಾಗುತ್ತಿದೆ. ತ್ಯಾಜ್ಯ ನೀರನ್ನು ಒಳಚರಂಡಿ ಸಂಸ್ಕರಣಾ ಘಟಕಗಳ (ಎಸ್‌ಟಿಪಿ) ಮೂಲಕ ಸಂಸ್ಕರಿಸಲು ಅಪಾರ್ಟ್ಮೆಂಟ್‌ಗಳಿಗೆ ನಿರ್ದೇಶಿಸಲಾಗಿದೆ. ಉಲ್ಲಂಘಿಸುವವರ ವಿರುದ್ಧ ಎಂಸಿಸಿ ಕಾರ್ಯಾಚರಣೆ ನಡೆಸಿ ದಂಡ ವಿಧಿಸಲಾಗುತ್ತಿದೆ. ಎಂಸಿಸಿ ಆಯುಕ್ತರು ಅಪಾರ್ಟ್ಮೆಂಟ್ ಸಂಘಗಳ ಸಭೆಯನ್ನು ಸಹ ಕರೆದು, ಮಳೆನೀರಿನ ಚರಂಡಿಗಳಿಗೆ ಒಳಚರಂಡಿ ನೀರು ಬಿಡದಂತೆ ನಿರ್ದೇಶಿಸಿದ್ದಾರೆ ಎಂದರು

ಅಪಾರ್ಟ್ಮೆಂಟ್‌ಗಳು ತಮ್ಮದೇ ಆದ ಪರಿಹಾರಗಳನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಅವರು ಹೇಳಿದರು.
ಒಟ್ಟಾರೆಯಾಗಿ ನಗರದ ಕೆಲವೆಡೆ ಹಳೆಯ ಒಳಚರಂಡಿ ವ್ಯವಸ್ಥೆ ಶಿಥಿಲಾವಸ್ಥೆಯಲ್ಲಿರುವ ಕಾರಣ ನಗರಕ್ಕೆ ಸಮಗ್ರ ಹೊಸ ಒಳಚರಂಡಿ ವ್ಯವಸ್ಥೆಗಾಗಿ ೧೨೦೦ ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದರು.

ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಕಂದಾಯ ಅಧಿಕಾರಿ ಅಕ್ಷತಾ ಕೆ. ಸೇರಿದಂತೆ ವಿವಿಧ ವಿಭಾಗಗಳ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್..
ನೀರಿನ ಸಮಸ್ಯೆ ಬಗ್ಗೆ ಜ.೨೯ರಂದು ಅಧಿಕಾರಿಗಳ ಸಭೆ
ನಗರದ ಸೈಮನ್ ಲೇನ್‌ನಿಂದ ಕರೆ ಮಾಡಿದ ನಿತ್ಯಾ ಎಂಬವರು ಹಲವು ಮನೆಗಳಿಗೆ ಕಳೆದ ಎರಡು ತಿಂಗಳಿನಿAದ ನೀರು ಬರುತ್ತಿಲ್ಲ. ನೀರಿಗಾಗಿ ಖಾಸಗಿ ಟ್ಯಾಂಕರ್‌ಗಳನ್ನು ಅವಲಂಬಿಸುವAತಗಿದೆ ಎಂದು ದೂರಿದರು.
ಅಧಿಕಾರಿಗಳಿಂದ ಉತ್ತರ ಪಡೆದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಲಸಿರಿ ಯೋಜನೆಯಡಿಯಲ್ಲಿ ಹಾಕಲಾದ ನೀರು ಸರಬರಾಜು ಜಾಲಕ್ಕೆ ಸಂಪರ್ಕ ಕಲ್ಪಿಸಿ ಮೂರು ದಿನಗೊಳಗೆ ನೀರು ಪೂರೈಕೆ ಆರಂಭಿಸಲಾಗುವುದು ಎಂದರು. ಚೊಕ್ಕಬೆಟ್ಟುವಿನ ಹಮೀದ್ ಎಂಬವರು ಕೂಡಾ ಜಲಸಿರಿಯಡಿಯಲ್ಲಿ ೨೪*೭ ನೀರು ಸರಬರಾಜು ಇದೆ ಎಂದು ಹೇಳಿಕೊಂಡರೂ, ಈ ಪ್ರದೇಶಕ್ಕೆ ಪ್ರತಿ ಮೂರು ದಿನಗಳಿಗೊಮ್ಮೆ ಮಾತ್ರ ನೀರು ಕೆಲ ಗಂಟೆ ಮಾತ್ರವೇ ಬರುತ್ತಿದೆ ಎಂದು ದೂರಿದರು.
ಎಂಸಿಸಿ ವ್ಯಾಪ್ತಿಯ ಕೆಲ ಎತ್ತರದ ಪ್ರದೇಶಗಳಿಗೆ ಒತ್ತಡದಿಂದಾಗಿ ನೀರು ಪೂರೈಕೆಯಾಗುತ್ತಿಲ್ಲ. ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಕರೆ ಮಾಡಿದವರಿಗೆ ಭರವಸೆ ನೀಡಿದ ಜಿಲ್ಲಾಧಿಕಾರಿ, ಪ್ರತಿಯೊಂದು ಮನೆಗೂ ನೀರು ಪೂರೈಕೆ ಮಾಡುವುದು ಪಾಲಿಕೆ ಕರ್ತವ್ಯವಾಗಿದ್ದು, ಸಮಸ್ಯೆಯನ್ನು ಶೀಘ್ರ ಬಗೆಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮುಂಬರುವ ಬೇಸಿಗೆಯಲ್ಲಿ ನಗರದಲ್ಲಿ ತಲೆದೋರಬಹುದಾದ ನೀರಿನ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅವರು, ಜನಸಂಖ್ಯೆಯ ಬೆಳವಣಿಗೆ ಮತ್ತು ವಾಣಿಜ್ಯ ಸಂಸ್ಥೆಗಳ ಹೆಚ್ಚಳದಿಂದಾಗಿ ನೀರು ಸರಬರಾಜು ಯಾವಾಗಲೂ ಸವಾಲಾಗಿದೆ. ಈಗ, ನೀರು ಸರಬರಾಜಿನಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು. ಜಿ¯್ಲೆಯಾದ್ಯಂತ ನೀರಿನ ಸಂಬAಧಿತ ಸಮಸ್ಯೆಗಳನ್ನು ಚರ್ಚಿಸಲು ಸಭೆ ಗುರುವಾರ ನಡೆಯಲಿದೆ ಎಂದು ಅವರು ಹೇಳಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!