ಬೆಳ್ತಂಗಡಿ – ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣದ ಬಗ್ಗೆ ಕೂಲಂಕುಷ ತನಿಖೆಗೆ ಶಾಸಕ ಹರೀಶ್ ಪೂಂಜಾ ಅವರು ಗೃಹಸಚಿವರಿಗೆ ಮನವಿ ಮಾಡಿದ್ದಾರೆ.
ಧನುರ್ಮಾಸದ ಕೊನೆಯ ಪೂಜೆಗೆಂದು ಹೋಗಿದ್ದ ಬಾಲಕ ಸುಮಂತ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣದ ಕೂಲಂಕುಷವಾಗಿ ತನಿಖೆ ಮಾಡುವಂತೆ ಶಾಸಕ ಹರೀಶ್ ಪೂಂಜಾ ಅವರು ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಜನವರಿ 14 ರಂದು ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಜಾನೆಯೇ ಮನೆಯಿಂದ ಹೊರಟಿದ್ದ ಸುಮುಂತ್ ನಿಗೂಢವಾಗಿ ನಾಪತ್ತೆಯಾಗಿದ್ದ, ಬಳಿಕ ಮನೆ ಸಮೀಪದ ಕೆರೆಯಲ್ಲಿ ಆತನ ಶವಪತ್ತೆಯಾಗಿತ್ತು, ಅಲ್ಲದೆ ತಲೆಯಲ್ಲಿ ಬಲವಾಗಿ ಹೊಡೆದ ಗಾಯದ ಗುರುತುಗಳಿದ್ದು, ಇದು ಆಕಸ್ಮಿಕವಾಗಿ ಸಂಭವಿಸಿದ ಸಾವು ಅಲ್ಲ, ಇದೊಂದು ಕೊಲೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಇಲ್ಲಿಯವರೆಗೆ ಪ್ರಕರಣದ ಕುರಿತಂತೆ ಯಾವುದೇ ಮಾಹಿತಿಯನ್ನು ಪೊಲೀಸ್ ಇಲಾಖೆ ಅಧಿಕೃತವಾಗಿ ನೀಡಿಲ್ಲ. ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಧಾನಸೌಧದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿ ಓಡಿಲ್ನಾಳ ಗ್ರಾಮದ ಸುಮಂತ್ ಎನ್ನುವ ಬಾಲಕನ ಅನುಮಾಸ್ಪದ ಸಾವಿನ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಆಗ್ರಹಿಸಿದ್ದಾರೆ.