ಕುಂದಾಪುರ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ: ನೋಡು ನೋಡುತ್ತಿದ್ದಂತೆ ಸುಟ್ಟು ಕರಕಲಾದ ಕಾರು!

ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನೋಡು ನೋಡುತ್ತಿದ್ದಂತೆ ಕಾರು ಸಂಪೂರ್ಣಚಾಗಿ ಬೆಂಕಿಗಾಹುತಿಯಾದ ಘಟನೆ ಹೆಮ್ಮಾಡಿ–ಕೊಲ್ಲೂರು ರಾಜ್ಯ ಹೆದ್ದಾರಿಯ ವಂಡ್ಸೆ ಗ್ರಾಮದ ಶಾರ್ಕೆ ಕ್ರಾಸ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದೆ.


ಬೀಜಾಡಿ ನಿವಾಸಿ ಭಾಸ್ಕರ್ ಆಚಾರ್ ಅವರಿಗೆ ಸೇರಿದ ಕಾರು ಇದಾಗಿದ್ದು, ಕಾರ್ಯನಿಮಿತ್ತ ಬೆಳಿಗ್ಗೆ ಆಲೂರಿಗೆ ತೆರಳಿದ್ದ ಅವರು ಸುಮಾರು 10 ಗಂಟೆಯ ವೇಳೆಗೆ ಅಲ್ಲಿಂದ ಕುಂದಾಪುರದತ್ತ ಮರಳುತ್ತಿದ್ದರು. ಈ ವೇಳೆ ಕಾರಿನ ಮುಂಭಾಗದಿಂದ ಶಬ್ದ ಸಹಿತ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಭಾಸ್ಕರ್ ಆಚಾರ್ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ.
ಆದರೆ, ಆಗಲೇ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗದೆ ಸ್ವಲ್ಪ ಹೊತ್ತಿನಲ್ಲೇ ಇಡೀ ಕಾರು ಸುಟ್ಟು ಕರಕಲಾಗಿದೆ. ಭಾಸ್ಕರ್ ಆಚಾರ್ ಸಮಯಕ್ಕೆ ಕಾರಿನಿಂದ ಇಳಿದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

SHARE
Loading spinner

Leave a Reply

Your email address will not be published. Required fields are marked *

error: Content is protected !!