ಕಾರ್ಕಳ: ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ: ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಸಾವು

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆಟ್ಟು ನಿವಾಸಿ ಗೀತಾ ಅವರ ಮೇಲೆ ಪತಿ ಸುನೀಲ್ ಕುಮಾರ್ ಮಾರಣಾಂತಿಕ ಹಲ್ಲೆ ನಡೆಸಿದ್ದು ಆರೋಪಿ ಪತ್ನಿ ಗೀತಾ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಕಳೆದ ಮಂಗಳವಾರ ಗೀತಾ ಹಾಗೂ ಅವರ ಪತಿ ಸುನೀಲ್ ಕುಮಾ‌ರ್ ನಡುವೆ ಸಾಂಸಾರಿಕ ವಿಚಾರವಾಗಿ ಗಲಾಟೆ ನಡೆದಿದ್ದು, ಈ ಸಂದರ್ಭ ಸುನೀಲ್ ಕುಮಾರ್ ಗೀತಾ ಅವರನ್ನು ಕೊಲ್ಲುವ ಉದ್ದೇಶದಿಂದ ಯಾವುದೋ ಆಯುಧದಿಂದ ಹಣೆಗೆ ಹಾಗೂ ಗದ್ದಕ್ಕೆ ಹೊಡೆದು ಗಂಭೀರ ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಗಾಯಗೊಂಡ ಗೀತಾ ಅವರನ್ನು ತಕ್ಷಣ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಘಟನೆಯ ಹಿನ್ನೆಲೆಯಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಸುನೀಲ್ ಕುಮಾ‌ರ್ (44) ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಗೀತಾ ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಈಗಾಗಲೇ ದಾಖಲಾಗಿದ್ದ ಕೊಲೆಗೆ ಯತ್ನ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದ್ದು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!