ಮಲ್ಪೆ : 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

ಉಡುಪಿ: ಮಲ್ಪೆ ಬೀಚ್ ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಶಾ ಯಾನೆ ಸುಮಿತ್ರ ಕೃಷ್ಣ ಮತ್ತು ರೇಖಾ ದಾನಪ್ಪ ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ವಾರೆಂಟ್ ಜಾರಿ ಮಾಡಲಾಗಿತ್ತು.

ಮಲ್ಪೆ ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಸಿಂಚನ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಜ. 31ರಂದು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ವಾರೆಂಟ್ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!