ತ್ರಾಸಿ ರಾಜು ದೇವಾಡಿಗ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ: ಮಂಜುನಾಥ ಭಂಡಾರಿ

ಕುಂದಾಪುರ: ಉಡುಪಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ತ್ರಾಸಿ ರಾಜು ದೇವಾಡಿಗ ಅವರು ನಿಧನರಾಗಿದ್ದು ಇದರಿಂದ ಪಕ್ಷ ಮತ್ತು ಇಡೀ ಸಮಾಜಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಆಗಿರುವ ಮಂಜುನಾಥ ಭಂಡಾರಿ ಅವರು ಕಂಬನಿ ಮಿಡಿದಿದ್ದಾರೆ.


ತ್ರಾಸಿ ರಾಜು ದೇವಾಡಿಗ ಅವರ ಜನಸೇವೆ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅವರ ಅಗ್ರಗಣ್ಯ ಸಾಧನೆ ಗಮನಾರ್ಹವಾಗಿದೆ. ಆಸ್ಕರ್ ಫೆರ್ನಾಂಡಿಸ್ ಅವರು ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಅವರೊಂದಿಗೆ ಪಕ್ಷದ ಕೆಲಸ ಮಾಡಿದ ನೆನಪು ಇನ್ನೂ ಹಚ್ಚಹಸಿರಾಗಿದೆ. ನಂತರದ ದಿನಗಳಲ್ಲಿ ನನ್ನ ಅತ್ಯಂತ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರು ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿದ್ದಾಗ ಬೈಂದೂರು ಕ್ಷೇತ್ರದಲ್ಲಿ ಬೆನ್ನೆಲುಬಾಗಿ ನಿಂತು ನನ್ನ ಮತ್ತು ಪಕ್ಷದ ಪರವಾಗಿ ದುಡಿದಿದ್ದರು. ರಾಜು ದೇವಾಡಿಗ ಅವರು ನನ್ನ ಪ್ರತಿಯೊಂದು ರಾಜಕೀಯ ಏಳಿಗೆಯಲ್ಲೂ ಯಾರಿಗೂ ಕಾಣದ ರೀತಿಯಲ್ಲಿ ಸಂಪೂರ್ಣ ಸಹಕಾರ ನೀಡಿದ್ದರು. ಅವರ ಅಗಲಿಕೆಯು ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಬೈಂದೂರು ಸುತ್ತಮುತ್ತಲಿನ ಬಡಜನರ ಪಾಲಿಗೆ ಭರಿಸಲಾರದ ನೋವನ್ನುಂಟು ಮಾಡಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!