ಮಂಗಳೂರು: ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಲಂ 405, 420, 406 ಹಾಗೂ 120(ಬಿ) ಐಪಿಸಿ ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಲಕ್ಷ್ಮೀಶ ಬಾಬು (48 ವರ್ಷ) ಎಂದು ಗುರುತಿಸಲಾಗಿದೆ. ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದೆ.
ಬಂಧನದ ಬಳಿಕ ಆರೋಪಿಯನ್ನು ಮಂಗಳೂರು ನಗರದ ಮಾನ್ಯ 7ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.