ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ನ ನಮ್ಮ ಕ್ಲಿನಿಕ್ ವೈದ್ಯರಾದ ಡಾ.ಧೃತಿ ಆಳ್ವ ಇವರು ಉನ್ನತ ವಿದ್ಯಾಭ್ಯಾಸ ಕ್ಕಾಗಿ ತೆರಳುತ್ತಿದ್ದು ಇವರಿಗೆ ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಯಾಗಿ ಸೇವೆ ಸಲ್ಲಿಸಿದ್ದ ಸಂದರ್ಭದಲ್ಲಿ ಶಾಲಾ ಮಕ್ಕಳ ಮೇಲಿನ ಮತ್ತು ಊರಿನ ನಾಗರೀಕರ ಮೇಲೆ ಇಟ್ಟಿರುವ ಕಾಳಜಿ ಮತ್ತು ಪ್ರೀತಿಯ ಆರೈಕೆಗೆ, ಹಾಗೂ ಬೆಂಗಳೂರಿನ ರಾಮ ನಗರ ಜಿಲ್ಲೆಯಲ್ಲಿ ಜರುಗಿದ ವಿಶೇಷ ಅಗತ್ಯ ವುಳ್ಳ ಮಕ್ಕಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮರಕಡ ಶಾಲೆಯ ವಿದ್ಯಾರ್ಥಿ ಗಳಾದ ಅಸೀಫ್ ಮತ್ತು ರಜಬೆ ಆಲಂ ಇವರನ್ನು ದ.ಕ.ಜಿ.ಪಂ ಸ.ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮರಕಡ, ಕುಂಜತ್ತಬೈಲ್, ಮಂಗಳೂರು ಇಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಶಿಕ್ಷಕರು,ವಿದ್ಯಾರ್ಥಿಗಳು ಮತ್ತು ಅಂಗನವಾಡಿ ಕೇಂದ್ರದ ಶಿಕ್ಷಕರ ವತಿಯಿಂದ ಅಭಿನಂದಿಸಲಾಯಿತು.
ಈ ಕಾರ್ಯಕ್ರಮ ದಲ್ಲಿ ಶಾಲಾ ಅಭಿವೃದ್ಧಿ, ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸುರೇಶ್, ನಿಕಟ ಪೂರ್ವ ಮ.ನ.ಪಾ ಸದಸ್ಯರಾದ ಶರತ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾರಾಯಣ ಸಾಲಿಯಾನ್, ಕಾರ್ಯದರ್ಶಿ ರೆಹಮಾನ್ ಖಾನ್ ಕುಂಜತ್ತಬೈಲ್, ಪ್ರಭಾರ ಮುಖ್ಯ ಶಿಕ್ಷಕಿ ಶೋಭ,ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ಸಂತೋಷ್ ಕುಮಾರ್, ಶಾಲಾ ಶಿಕ್ಷಕರು,ಅಂಗನವಾಡಿ ಕಾರ್ಯಕರ್ತರು ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು. ಶಾಲಾ ಮು.ಶಿಕ್ಷಕಿ ಶೋಭಾ ಸ್ವಾಗತಿಸಿದರು, ಸರಿತಾ ಕಾರ್ಯಕ್ರಮ ನಿರೂಪಿಸಿದರು, ರಾಜೇಶ್ವರಿ ಧನ್ಯವಾದ ಗೈದರು.