ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು.
ಬಳಿಕ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.