ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧನ: 22 ಕೆ.ಜಿ 250 ಗ್ರಾಂ ತೂಕದ ಅಕ್ರಮ ಗಾಂಜಾ ವಶ

ಮಂಗಳೂರು: ಮಂಗಳೂರಲ್ಲಿ ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧಿಸಲಾಗಿದೆ. ಇಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ಹೊರ ರಾಜ್ಯ ದಿಂದ ತಂದಿರುವ ಬಗ್ಗೆ ಮಾಹಿತಿ ಪಡೆದು ಉತ್ತರ ಉಪ ವಿಭಾಗದ ಎ.ಸಿ.ಪಿ. ರವರು ಮತ್ತು ಅವರ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಪಣಂಬೂರು ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿತು. ಇದೇ ವೇಳೆ ಆರೋಪಿಗಳಾದ ಕರಣ್ ಬಾಬು ರಾಂ ಜಾದವ್ , ಸಮೀರ್ ಶಾ, ಎಂ.ಹೆಚ್. ಮಯ್ಯದಿ, ಇಬ್ರಾಹಿಂ ಕಲೀಲ್ ಎಂಬವರನ್ನು ಬಂಧಿಸಿ ಇವರ ವಶದಲ್ಲಿದ್ದ 22 ಕೆ.ಜಿ 250 ಗ್ರಾಂ ಗಾಂಜಾ (ಅಂದಾಜು ಮೌಲ್ಯ 11,12,500) ಮತ್ತು 6 ಮೊಬೈಲ್ (ಅಂದಾಜು ಮೌಲ್ಯ 18,000) ನ್ನು ಹಾಗೂ ಗಾಂಜಾ ಸಾಗಿಸಲು ಬಳಸಿದ ಎರಡು ಸ್ಕೂಟರ್ ಗಳನ್ನು (ಅಂದಾಜು ಮೌಲ್ಯ ರೂ. 1,00,000) ಸ್ವಾಧೀನಪಡಿಸಿಕೊಳ್ಳಲಾಗಿದೆ.


ಆರೋಪಿತರ ಪೈಕಿ ಕರಣ್ ಬಾಬು ರಾಂ ಜಾದವ್ ಮತ್ತು ಸಮೀರ್ ಶಾ ಎಂಬವರು ಗಾಂಜಾವನ್ನು ಮಹಾರಾಷ್ಟ್ರ ಮಯ್ಯದಿ ಹಾಗೂ ಮಧ್ಯ ಪ್ರದೇಶ ಶಾರೂಕ್ ಎಂಬುವವರಿಂದ ಪಡೆದು ತಂದು ಉಡುಪಿ ಹೆಜಮಾಡಿ ಕೋಡಿಯ ಎಂ.ಹೆಚ್. ಮಯ್ಯದಿ ಮತ್ತು ಮಂಗಳೂರಿನ ಇಬ್ರಾಹಿಂ ಕಲೀಲ್ ರವರಿಗೆ ನೀಡುತ್ತಿದ್ದು, ಈ ಇಬ್ಬರು ಗಾಂಜಾವನ್ನು ಉಡುಪಿ, ಮಲ್ಪೆ, ಕಾರ್ಕಳ, ಮುಲ್ಕಿ, ಸುರತ್ಕಲ್, ಪಣಂಬೂರು, ಹಾಗೂ ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದುದಾಗಿ ತಿಳಿದು ಬಂದಿದೆ. ಈ ಹಿಂದೆ ಕೂಡಾ ಹಲವು ಭಾರಿ ಗಾಂಜಾವನ್ನು ಅಕ್ರಮವಾಗಿ ತಂದು ಉಡುಪಿ ಜಿಲ್ಲೆ ಮತ್ತು ಮಂಗಳೂರು ನಗರದಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ.


ಆರೋಪಿತರುಗಳಿಂದ ಸ್ವಾಧೀನಪಡಿಸಿಕೊಳ್ಳಲಾದ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಗಳ ಒಟ್ಟು ಮೌಲ್ಯ 12,30,500.
ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.21/2026 ಕಲಂ:8(C), 20(b),(ii)(C) NDPS Act ನಂತೆ ಪ್ರಕರಣ ದಾಖಲಿಸಿ ತನಿಖೆಯನ್ನು ಮಾಡಲಾಗುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!