ಉಡುಪಿ: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದ ಯುವಕ

ಉಡುಪಿ: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದ ಯುವಕನನ್ನು ರಕ್ಷಣೆ ಮಾಡಿರುವ ಘಟನೆ ಉಡುಪಿ ಕಲ್ಸಂಕ ಜಂಕ್ಷನ್ ನಲ್ಲಿ ನಡೆದಿದೆ.


ಸದಾ ಸಂಚಾರದಟ್ಟನೆಯಿಂದ ಕೂಡಿರುವ ಜಂಕ್ಷನ್‌ನಲ್ಲಿ ಯುವಕ ಹುಚ್ಚಾಟ ಮೆರೆದಿದ್ದಾನೆ. ಭಯದ ವಾತಾವರಣ ಸೃಷ್ಟಿಸಿ ಟ್ರಾಫಿಕ್ ಸಿಬ್ಬಂದಿಗಳ ಕರ್ತವ್ಯಕ್ಕೂ‌ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಎಚ್ಚೆತ್ತ ಟ್ರಾಫಿಕ್ ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದಾರೆ. ಸಮಾಜಸೇವಕ ನಿತ್ಯಾನಂದ‌ ಒಳಕಾಡು ಸಹಕರಿಸಿದರು.


ಈತ ಈ ಹಿಂದೆಯೂ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿಕೊಂಡು‌ ಬಂದು ಮೈಮೇಲೆ ಸುರಿದು ಬೆಂಕಿ ಹಚ್ಚಿಕೊಳ್ಳುತ್ತೇನೆಂದು ಬೊಬ್ಬೆ ಹಾಕುತ್ತಿದ್ದನು. ಹಲವು ಬಾರಿ ಪೋಲಿಸರು ಪೆಟ್ರೋಲ್ ಬಾಟಲಿಯನ್ನು ಕಸಿದುಕೊಂಡು ಆತನನ್ನು ಅಪಾಯದಿಂದ ಪಾರು ಮಾಡಿದ್ದರು. ಈಗ ಮತ್ತೊಮ್ಮೆ ಬಾಟಲಿಯಲ್ಲಿ ಪೆಟ್ರೋಲ್ ತಂದು ಮೈಮೇಲೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ಟ್ರಾಫಿಕ್ ಪೊಲೀಸರ ಸಮಯಪ್ರಜ್ಞೆಯಿಂದ ಸಂಭವನೀಯ ಅನಾಹುತವೊಂದು ತಪ್ಪಿದಂತಾಗಿದೆ. ಆತನನ್ನು ವಶಕ್ಕೆ ಪಡೆದ ಪೋಲಿಸರು ಮನವೊಲಿಸಿ ಆತನ ಊರಾದ ಗದಗಕ್ಕೆ ಕಳುಹಿಸಿಕೊಟ್ಟಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!