ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ

ಮಂಗಳೂರು : ರೋಟರಿ ಕ್ಲಬ್ ಮಂಗಳೂರು, ಝಲೇಖಾ ಯೆನಪೆÇಯ ಇನ್ಸ್ಟಿಟ್ಯೂಟ್ ಆಫ್ ಅಂಕೋಲಾಜಿ ಹಾಗೂ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಮಹಾನಗರಪಾಲಿಕೆ ಮಂಗಳೂರು ಇದರ ಸಹಯೋಗದೊಂದಿಗೆ ವಿಶೇಷವಾಗಿ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವು ಬುಧವಾರ ಎಸ್.ಕೆ.ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಕಛೇರಿಯಲ್ಲಿ ಜರುಗಿತು.


ಕಾರ್ಯಕ್ರಮವನ್ನು ಮಹಾನಗರಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಉದ್ಘಾಟಿಸಿ ಮಾತನಾಡಿ, ಮಹಿಳಾ ಸಿಬ್ಬಂದಿಗಳಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಯಾವುದೇ ಅಂಜಿಕೆ ಇಲ್ಲದೇ ಮಹಿಳೆಯರು ಇದರ ಪ್ರಯೋಜನವನ್ನು ಪಡೆಯುವಂತೆ ಕರೆ ನೀಡಿದರು.
ಮಂಗಳೂರು ರೋಟರಿ ಕ್ಲಬ್ ಸಮುದಾಯ ಸೇವಾ ನಿರ್ದೇಶಕ ಡಾ. ಸಿದ್ಧಾರ್ಥ ಶೆಟ್ಟಿ ಮಾತನಾಡಿ, ರೋಟರಿ ಫೌಂಡೇಶನ್ ಗ್ಲೋಬಲ್ ಗ್ರ್ಯಾಂಟ್ ಯೋಜನೆ ಮುಖಾಂತರ ರೂ. 1.25 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಸೌಕರ್ಯವುಳ್ಳ “ವಿಮೆನ್ ವೆಲ್ ನೆಸ್ ಕ್ಲಿನಿಕ್” ಎನ್ನುವ ಬಸ್ ನ್ನು ಝಲೇಖಾ ಯೆನಪೆÇಯ ಆಸ್ಪತ್ರೆಗೆ ಹಸ್ತಾಂತರಿಸಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಹೆಚ್ಚಾಗಿ ಕಾಣಿಸುತ್ತಿರುವ ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್ , ಗರ್ಭಕಂಠದ ಕ್ಯಾನ್ಸರ್ ಹಾಗೂ ಗರ್ಭಕೋಶದಂತಹ ಕ್ಯಾನ್ಸರ್ ಕಾಯಿಲೆ ಗಂಭೀರವಾಗುವ ಮುನ್ನವೇ ಆರಂಭಿಕ ಹಂತದಲ್ಲಿ ರೋಗವನ್ನು ಪತ್ತೆಹಚ್ಚಲು ಇದು ಸಹಕಾರಿಯಾಗಿದೆ ಎಂದು ತಿಳಿಸಿದರು. ಝಲೇಕಾ ಯೆನಪೆÇಯ ಇನ್ಸ್ಟಿಟ್ಯೂಟ್ ಆಫ್ ಅಂಕೋಲಾಜಿ ವಿಭಾಗದ ಡಾ. ಅಶ್ವಿನಿ ಶೆಟ್ಟಿ ಅವರು ಮಹಿಳೆಯರಲ್ಲಿ ಕಂಡು ಬರುವ ಕ್ಯಾನ್ಸರ್ ರೋಗದ ಲಕ್ಷಣಗಳನ್ನು ವಿವರಿಸಿ ಪ್ರತಿಯೊಬ್ಬ ಮಹಿಳೆಯು ಯಾವುದೇ ಮುಜುಗರವಿಲ್ಲದೇ ಆರೋಗ್ಯ ತಪಾಸಣೆಯನ್ನು ನಡೆಸುವಂತೆ ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಅಕ್ಷತಾ, ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಅಧ್ಯಕ್ಷ ಬಾಲು, ಮಂಗಳೂರು ಮಹಾನಗರಪಾಲಿಕೆಯ ಕಛೇರಿ ಸಹಾಯಕಿ (ಕಂದಾಯ) ಭಾರತಿ ಹಾಗೂ ರೋಟರಿ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.
ಮಂಗಳೂರು ಮಹಾನಗರಪಾಲಿಕೆಯ ಮಹಿಳಾ ಸಿಬ್ಬಂದಿಯವರು ತಪಾಸಣಾ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಂಡರು.
ಮಹಾನಗರಪಾಲಿಕೆಯ ಸಮುದಾಯ ಸಂಘಟನಾಧಿಕಾರಿ ಮಾಲಿನಿ ರೊಡ್ರಿಗಸ್ ನಿರೂಪಿಸಿದರು. ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಲಕ್ಷ್ಮೀಕಾಂತ್ ವಂದಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!