ಬಂಟ್ವಾಳ: ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ನಡೆದಿದೆ.
ಅಡ್ಯಾರು ನಿವಾಸಿ ಜಯರಾಮ (65) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಎರಡು ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ಬಡಗುಂಡಿ ಎಂಬಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಸವಾರನಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಆದರ್ಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.