ಉಡುಪಿ: ಮಲ್ಪೆ ಬಂದರಿನ ದಕ್ಕೆಯ ಸಮೀಪ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ.ಮೃತ ವ್ಯಕ್ತಿಯ ಹೆಸರು ಮತ್ತು ವಿಳಾಸ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆಯ ಕುರಿತು ಮಾಹಿತಿ ಪಡೆದ ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ನಾಗರಾಜ್ ಮತ್ತು ಮಲ್ಲಿಕಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದರು.
ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಮೃತದೇಹವನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಲಾಯಿತು. ಈ ಕಾರ್ಯದಲ್ಲಿ ಹರೀಶ್ ಪೂಜಾರಿ ಹಾಗೂ ಭುವನೇಶ್ ಶಿರಿಯಾನ್ ಸಹಕರಿಸಿದರು.ಮೃತದೇಹವನ್ನು ಹೆಚ್ಚಿನ ಪರಿಶೀಲನೆಗಾಗಿ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಸಂಬಂಧಿಕರು ಅಥವಾ ವಾರಸುದಾರರು ಇದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.