ವಿಟ್ಲ ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ

ವಿಟ್ಲ: ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ನಡೆದಿದೆ.ಸರಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿಯಾದ ಅಬ್ದುಲ್ ಗಫೂರ್ ಎಂಬಾತನು ಅಕ್ರಮವಾಗಿ ಶೆಡ್ ನಿರ್ಮಿಸಿ ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ದಾಸ್ತಾನು ಮಾಡುತ್ತಿದ್ದಾನೆ ಎನ್ನಲಾಗಿದೆ. ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯತನದಿಂದ ಸುಡುಮದ್ದುಗಳನ್ನು ಸಂಗ್ರಹಿಸಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಮರಗಳು ಸುಟ್ಟು ಹಾನಿಗೊಳಗಾಗಿವೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಫೋಟಕ ವಸ್ತುಗಳ ಕಾಯ್ದೆ 1884ರ ಕಲಂ 9B ಹಾಗೂ ಬಿಎನ್‌ಎಸ್ ಕಲಂ 288 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ. ಆರೋಪಿತ ಅಬ್ದುಲ್ ಗಫೂರ್ ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!