ಮಂಗಳೂರು: ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ನಡೆದ ಕನ್ನಡ ಭವನ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ದಂಪತಿಗೆ “ಕನ್ನಡ ಕಟ್ಟಾಳು” ವಿಶೇಷ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಶ್ರೀಮತಿ ರೇಖಾ ಸುದೇಶ್ ರಾವ್ ಅಧ್ಯಕ್ಷೆಯಾಗಿರುವ ಹಾಗೂ ಡಾ. ರವೀಂದ್ರ ಜೆಪ್ಪು ಗೌರವ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಭವನದ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಯಾಧ್ಯಕ್ಷ ಉಮೇಶ್ ರಾವ್ ಕುಂಬ್ಳೆ, ಕನ್ನಡ ಭವನದ ಕಾರ್ಯಚಟುವಟಿಕೆಗಳು ಹಾಗೂ ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಅವರ ಕನ್ನಡಾಭಿಮಾನ ಮತ್ತು ಸೇವಾ ಮನೋಭಾವದ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರಿನ ಮುಂದಾಳು ಜೆ. ಕೆ. ರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ಎಚ್. ಪ್ರಭಾಕರ್ ರಾವ್, ವಿಶ್ವ ರಾಮಕ್ಷತ್ರಿಯ ಮಹಾಸಂಘದ ಕಾರ್ಯಾಧ್ಯಕ್ಷ ಶ್ರೀನಿವಾಸ್ ಹೆಬ್ರಿ, ಡಾ. ರಾಜೇಶ್, ಡಾ. ಸತೀಶ್, ಪ್ರದೀಪ್ ಬೇಕಲ್ ಭಾಗವಹಿಸಿದರು.
ಸ್ವಾಗತ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಸ್ವಾಗತಿಸಿದರು. ಕನ್ನಡ ಭವನ ಕರ್ನಾಟಕ ರಾಜ್ಯ ಸಂಚಾಲಕ ಜಯಾನಂದ ಪೆರಾಜೆ ಧನ್ಯವಾದ ಸಮರ್ಪಿಸಿದರು.
ನಗರಸಭಾ ಸದಸ್ಯರಾದ ಶಾರದಾ ಜೆ.ಪಿ.ನಗರ ಹಾಗೂ ರಾಮಕೃಷ್ಣ ಹೊಳ್ಳ ಉಪಸ್ಥಿತರಿದ್ದರು.
ಕಾರ್ಯದರ್ಶಿ ವಸಂತ್ ಕೆರೆಮನೆ ಕಾರ್ಯಕ್ರಮ ನಿರೂಪಿಸಿದರು.