ಉಡುಪಿ: ಬಸ್–ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಉಡುಪಿ: ಸಂತೆಕಟ್ಟೆಯ ಲಕ್ಷ್ಮೀನಗರ ರಸ್ತೆಯಲ್ಲಿ ವಾರದ ಹಿಂದೆ ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತರನ್ನು ಹೆರ್ಗದ ಶೆಟ್ಟಿಬೆಟ್ಟು ನಿವಾಸಿ ಮೊಹಮ್ಮದ್ ಝದ್ (19) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿನ್ನೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪಿಯುಸಿ ಶಿಕ್ಷಣ ಪೂರ್ಣಗೊಳಿಸಿದ್ದ ಝದ್ ಶೀಘ್ರದಲ್ಲೇ ಉದ್ಯೋಗಕ್ಕಾಗಿ ಗಲ್ಫ್ ರಾಷ್ಟ್ರಕ್ಕೆ ತೆರಳಲು ಸಿದ್ಧತೆ ನಡೆಸುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಮೃತರು ತಂದೆ–ತಾಯಿ ಹಾಗೂ ಒಬ್ಬ ಸಹೋದರರನ್ನು ಅಗಲಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!