ಉಳ್ಳಾಲ ನಗರಸಭೆಯ ಅಧ್ಯಕ್ಷರ ಕಾರು ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿದ್ದ ಅಶೋಕ್ ಉಳ್ಳಾಲಬೈಲ್ (64) ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಶೋಕ ವ್ಯಕ್ತವಾಗಿದೆ.
ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್, ಮಂಗಳೂರು ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಸಭಾಧ್ಯಕ್ಷರ ಆಪ್ತ ಸಹಾಯಕ ಮನ್ಸೂರ್ ಮಂಚಿಲ್, ದಿನೇಶ್ ರೈ, ಸುರೇಶ್ ಭಟ್ನಗರ, ಮುಸ್ತಾಫ ಅಬ್ದುಲ್ಲ ಹಾಗೂ ಪದ್ಮನಾಭ ಉಳ್ಳಾಲಬೈಲ್ ಅವರು ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.