ಪಡೀಲ್‌ನಲ್ಲಿ ರಸ್ತೆ ಅಪಘಾತ: ಬೈಕ್‌ಗೆ ಗೂಡ್ಸ್ ಟೆಂಪೋ ಡಿಕ್ಕಿ – ಯುವಕ ಮೃತ್ಯು

ಮಂಗಳೂರು: ಗೂಡ್ಸ್ ಟೆಂಪೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ನಡೆದಿದೆ.

ಮೃತರನ್ನು ಸಚ್ಚೇರಿಪೇಟೆ ಕುದ್ರೋಟ್ ನಿವಾಸಿ ಸಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಅವರು ಮಂಗಳೂರಿನ ಟಾಟಾ ಶೋರೂಮ್‌ನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು.

ಮಾ. 9ರಂದು ಬೆಳಿಗ್ಗೆ ಸಜೇಶ್ ಅವರು ತಮ್ಮ ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪಡೀಲ್ ಸಮೀಪದ ತಿರುವಿನಲ್ಲಿ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಬೈಕ್ ಸಮೇತ ರಸ್ತೆಗೆ ಬಿದ್ದ ಸಜೇಶ್ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಜೇಶ್ ಅವರು ಸಣ್ಣ ವಯಸ್ಸಿನಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡಿದ್ದರು. ಐದು ತಿಂಗಳ ಹಿಂದೆಯಷ್ಟೇ ಹೊಸ ಮನೆಯನ್ನು ನಿರ್ಮಿಸಿ ಒಬ್ಬರೇ ವಾಸಿಸುತ್ತಿದ್ದರು ಎನ್ನಲಾಗಿದೆ.

ಘಟನೆಯ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!