ಬಂಟ್ವಾಳದಲ್ಲಿ ಮನೆಯಲ್ಲೇ ಮಾದಕ ವಸ್ತು ಮಾರಾಟ: 17.97 ಗ್ರಾಂ MDMA ವಶ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಪ್ರದೇಶದಲ್ಲಿ ಮನೆಯಲ್ಲೇ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ವಾಳದ ನೇರಳಕಟ್ಟೆ ಇಂದಿರಾ ನಗರದಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿ.ಎಂ.ಎ (MDMA) ಅನ್ನು ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತು.

ಈ ಮಾಹಿತಿ ಆಧರಿಸಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ ಅವರು ಸಿಬ್ಬಂದಿಗಳೊಂದಿಗೆ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಪ್ರದೇಶದಲ್ಲಿರುವ ಮನೆಗೆ ದಾಳಿ ನಡೆಸಿದರು. ದಾಳಿಯ ವೇಳೆ ಆರೋಪಿತ ಅಶ್ರಫ್ ಜಿ (38) ಮನೆದಲ್ಲಿದ್ದು, ಅವನ ಜೊತೆಗೆ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್.ಎ. ಇದ್ದರು.

ಮನೆಯ ಪರಿಶೀಲನೆಯ ವೇಳೆ ಒಟ್ಟು 17.97 ಗ್ರಾಂ ತೂಕದ, ಅಂದಾಜು ರೂ.1,79,700 ಮೌಲ್ಯದ MDMA ಮಾದಕ ವಸ್ತು, ಒಂದು ಚೂರಿ ಹಾಗೂ ಇತರೆ ವಸ್ತುಗಳು ಪತ್ತೆಯಾಗಿದ್ದು, ಅವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 61/2026 ದಾಖಲಿಸಲಾಗಿದ್ದು, NDPS ಕಾಯ್ದೆ 1985ರ ಕಲಂ 8(C), 22(C) ಹಾಗೂ ಆರ್ಮ್ಸ್ ಅಕ್ಟ್‌ನ ಕಲಂ 27ರಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸಲಾಗುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!