ಉಡುಪಿ: ಡೆತ್ ನೋಟ್ ಬರೆದಿಟ್ಟು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಶಂಕರಪುರದ ಸಾಲ್ಮರ ಕ್ಯಾಟರಿಂಗ್ ಸೆಡ್ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಸಾಲ್ಮರದಲ್ಲಿರುವ ಕ್ಯಾಟರಿಂಗ್ ಸೆಡ್ ಸಮೀಪದ ಒಂದು ಕೊಠಡಿಯಲ್ಲಿ ಆತ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಘಟನೆ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಗೌತಮ್ ಪೂಜಾರಿ ಅವಿವಾಹಿತನಾಗಿದ್ದು, ಕ್ಯಾಟರಿಂಗ್ ಸಂಸ್ಥೆಯಲ್ಲಿ ಮುಖ್ಯ ಅಡುಗೆಗಾರನಾಗಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಎಲ್ಲರೊಂದಿಗೆ ಸ್ನೇಹಪರವಾಗಿ ಬೆರೆಯುತ್ತಿದ್ದ ಗೌತಮ್ ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುತ್ತಿದ್ದನು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಶಿರ್ವ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.