ಡಾ. ವಾಮನ್ ರಾವ್ ಬೇಕಲ್ ಅವರಿಗೆ ರಾಜ್ಯ ಮಟ್ಟದ ‘ಹೊಯ್ಸಳ ಪ್ರಶಸ್ತಿ’

ಕಾಸರಗೋಡು ಕನ್ನಡ ಭವನ ಸಮೂಹ ಸಂಸ್ಥೆಗಳ ರೂವಾರಿ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಅವರಿಗೆ ಕರ್ನಾಟಕದ ಪ್ರತಿಷ್ಠಿತ ರಾಜ್ಯ ಮಟ್ಟದ ‘ಹೊಯ್ಸಳ ಪ್ರಶಸ್ತಿ – 2025’ ಲಭಿಸಿದೆ.

ಮೈಸೂರು ನಗರದ ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಪತ್ರಿಕಾ ಬಳಗವು ಪ್ರತಿವರ್ಷ ನೀಡುವ ಈ ಪ್ರಶಸ್ತಿಗೆ, ಗಡಿನಾಡಿನಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಡಾ. ವಾಮನ್ ರಾವ್ ಬೇಕಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೊಯ್ಸಳ ಕನ್ನಡ ಸಂಘದ ಅಧ್ಯಕ್ಷರು, ಪತ್ರಕರ್ತರು, ಸಾಹಿತಿಗಳು ಹಾಗೂ ಸಂಘಟಕರಾದ ರಂಗನಾಥ್ ಮೈಸೂರು ತಿಳಿಸಿದ್ದಾರೆ.

ಈ ಪ್ರಶಸ್ತಿಯನ್ನು ಇದೇ ಬರುವ ಏಪ್ರಿಲ್ 5ರಂದು ಮೈಸೂರಿನ ನಾದಬ್ರಹ್ಮ ಸಭಾಂಗಣದಲ್ಲಿ ನಡೆಯಲಿರುವ ಸವಿಗನ್ನಡ ಪತ್ರಿಕೆಯ 26ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ಆಯ್ಕೆ ಸಮಿತಿಯ ಗೌರವ ಸಂಚಾಲಕರಾದ ಡಾ. ರಘುರಾಮ್ ವಾಜಪೇಯಿ ಈ ವಿಷಯವನ್ನು ಪ್ರಕಟಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕನ್ನಡ ಭವನ ಮೈಸೂರು ಘಟಕದ ಸದಸ್ಯರು ಹಾಗೂ ಎಲ್ಲಾ ಕನ್ನಡಾಭಿಮಾನಿಗಳು ಭಾಗವಹಿಸಬೇಕೆಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ವಿನಂತಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!