8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯ ಬಂಧನ

ಬಂಟ್ವಾಳ: ಕರ್ನಾಟಕ ರಾಜ್ಯದಿಂದ ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಪ್ರಕರಣದ ಅರೋಪಿಯಾಗಿದ್ದು, ಕಳೆದ ಎಂಟು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:166/2017, ಕಲಂ 379 r/w 34 IPC ನೇ ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಕೇರಳ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಗಳಾದ ಹೆಚ್ ಸಿ 314 ಸಂತೋಷ್ ಪಿಸಿ 2462 ಶಿವಾನಂದ ಮಡ್ಡಿ ರವರು ಬಂಧಿಸಿದ್ದಾರೆ.
ಆರೋಪಿಯನ್ನು ತಮಿಳುನಾಡು ರಾಜ್ಯದ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಎಂಬಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!