ಮೂಡುಬಿದಿರೆ: ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಮಿನಿ ಗೂಡ್ಸ್ ಟೆಂಪೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಬಂಟ್ವಾಳ ತಾಲೂಕು ಕೆಲಿಂಜೆ ನಿವಾಸಿ Lester David D’Souza (30) ಎಂದು ಗುರುತಿಸಲಾಗಿದೆ.
ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್, ವಿರುದ್ಧ ದಿಕ್ಕಿನಲ್ಲಿ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಮಿನಿ ಗೂಡ್ಸ್ ಟೆಂಪೋಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರಿಯಾದ ರಸ್ತೆ ಡೈವರ್ಷನ್ ವ್ಯವಸ್ಥೆ ಇಲ್ಲದಿರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಕ್ಷಣವೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.