ಬಜ್ಪೆ ವ್ಯಾಪ್ತಿಯಲ್ಲಿ ಅಕ್ರಮ ದನ ಸಾಗಾಟ: 5 ದನಗಳ ರಕ್ಷಣೆ, ಆರೋಪಿಗಳು ಪರಾರಿ

ಮಂಗಳೂರು: ಬುಧವಾರ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಸಮೀಪ ಹಿಂಸಾತ್ಮಕವಾಗಿ ದನ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಬಜರಂಗಿ ದಳ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಅನುಮಾನಾಸ್ಪದ ಕಾರನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ, ಆರೋಪಿಗಳು ಸ್ಥಳದಿಂದ ಪರಾರಿಯಾದರು.

ಪರಿಶೀಲನೆ ವೇಳೆ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಐದು ದನಗಳನ್ನು ಸಾಗಾಟ ಮಾಡಲಾಗುತ್ತಿರುವುದು ಪತ್ತೆಯಾಯಿತು. ದನಗಳನ್ನು ರಕ್ಷಣೆಗೊಳಪಡಿಸಲಾಗಿದ್ದು, ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಈ ಘಟನೆ Bajpe Police Station ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲದೆ, ಫಾರ್ಚುನರ್ ಕಾರಿನಲ್ಲಿ ಮಾರಕಾಯುಧವೂ ಪತ್ತೆಯಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!