ಟಿಪ್ಪರ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಗುರುವಾರ ಕಾರ್ಕಳ ತಾಲೂಕಿನ ಪಳ್ಳಿ ಅಡಪಾಡಿ ಸಮೀಪ ನಡೆದಿದೆ.

ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ.

ಗಣೇಶ್ ನಾಯಕ್ ಅವರು ತಮ್ಮ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ತೆರಳುತ್ತಿದ್ದ ವೇಳೆ, ಆರೋಪಿಯು ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೈಕ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ಪರಿಣಾಮ ಗಣೇಶ್ ನಾಯಕ್ ಅವರು ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಟಿಪ್ಪರ್ ಲಾರಿಯ ಹಿಂಬದಿಯ ಟಯರ್ ಗಣೇಶ್ ನಾಯಕ್ ಅವರ ತಲೆಯ ಮೇಲೆ ಹರಿದಿದ್ದು, ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!