ಉಡುಪಿ: ಉಡುಪಿಯ ಮಿಷನ್ ಕಾಂಪೌಂಡ್‌ನಲ್ಲಿ ಮಾ.20ರಿಂದ 22ರವರೆಗೆ ನಡೆಯುತ್ತಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮವನ್ನು ವಿರೋಧಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಹಿನ್ನೆಲೆಯಲ್ಲಿ ಕಾರ್ಯಕರ್ತರು ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ಮೊದಲಿಗೆ ಸಭೆ ನಡೆಸಿ, ನಂತರ ಮಹೋತ್ಸವ ನಡೆಯುತ್ತಿರುವ ಮಿಷನ್ ಕಾಂಪೌಂಡ್ ಮೈದಾನದ ಕಡೆಗೆ ತೆರಳಲು ಯತ್ನಿಸಿದರು. ಪರಿಸ್ಥಿತಿ ಉದ್ವಿಗ್ನವಾಗುವ ಸಾಧ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಬಳಿಕ ಅವರನ್ನು ಮಣಿಪಾಲ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ ನಂತರ ಬಿಡುಗಡೆ ಮಾಡಲಾಯಿತು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉಡುಪಿ ನಗರ ಠಾಣೆಯ ಪ್ರಭಾರ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಕಟ್ಟುನಿಟ್ಟಿನ ಭದ್ರತೆ ಒದಗಿಸಲಾಗಿತ್ತು.