ಗ್ಯಾಸ್ ಪಂಪ್‌ನಲ್ಲಿ ಸಿಬ್ಬಂದಿ ಮೇಲೆ ಹಲ್ಲೆ: ಆಟೋ ಚಾಲಕನ ವಿರುದ್ಧ ಪ್ರಕರಣ

ಬಂಟ್ವಾಳ: ಗ್ಯಾಸ್ ಪಂಪ್‌ನಲ್ಲಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಮೆಲ್ಕಾರ್‌ನಲ್ಲಿ ನಡೆದಿದ್ದು, ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅಫ್ರಿಧಿ ಕಾರಾಜೆ ಎಂಬಾತ ಆರೋಪಿಯಾಗಿದ್ದು, ಈತನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಸಮೀಪದ ಕಾರಾಜೆ ಪ್ರದೇಶದಲ್ಲಿರುವ ಗ್ಯಾಸ್ ಪಂಪ್‌ನಲ್ಲಿ ಮಾರ್ಚ್ 20ರಂದು ಸಂಜೆ ಈ ಘಟನೆ ನಡೆದಿದೆ. ಕೆಎ 19 ಎಸಿ 2102 ನೋಂದಣಿ ಸಂಖ್ಯೆಯ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬಂದ ಆರೋಪಿಯು ಗ್ಯಾಸ್ ಪಂಪ್ ಆವರಣಕ್ಕೆ ಪ್ರವೇಶಿಸಿ, ಕಚೇರಿ ಸಿಬ್ಬಂದಿ ಅಶ್ವಿನ್ ಅವರಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ.

ನಂತರ ಹೊರಬಂದು ಗ್ಯಾಸ್ ಪಂಪ್‌ನ ಸೊತ್ತುಗಳಿಗೆ ಹಾನಿ ಮಾಡಿದ್ದು, ಸುಮಾರು ₹48,000 ಮೌಲ್ಯದ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಗ್ಯಾಸ್ ಪಂಪ್ ಮ್ಯಾನೇಜರ್ ಕುನಲ್ ಭುಹ್ನಿಯಾ ನೀಡಿದ ದೂರಿನ ಮೇರೆಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) 2023ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!