ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಬಿ. ಜನಾರ್ದನ ಪೂಜಾರಿ ಅವರು ಸಂಸದನಾಗಿ ಕಾರ್ಯನಿರ್ವಹಣೆ ಕುರಿತು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೊಂದಿಗೆ ಚರ್ಚೆ ನಡೆಸಿ, ಉತ್ತಮವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳುವಂತೆ ಶುಭಹಾರೈಸಿದರು.
ಈ ಶಿಷ್ಟಾಚಾರ ಭೇಟಿಯ ವೇಳೆ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಕೂಡ ಉಪಸ್ಥಿತರಿದ್ದರು.