ಉಡುಪಿ: ಹೆಜಮಾಡಿ ಟೋಲ್ ಸಮೀಪದ ಟಯರ್ ಪಂಕ್ಚರ್ ಅಂಗಡಿಯಲ್ಲಿ ಭಾನುವಾರ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಅಗ್ನಿ ಅವಘಡದ ಪರಿಣಾಮ ಬಾನೆತ್ತರಕ್ಕೆ ಹೊಗೆ ಆವರಿಸಿಕೊಂಡಿದ್ದು, ಸುತ್ತಮುತ್ತಲಿನ ಗಿಡಮರಗಳು ಬೆಂಕಿಗಾಹುತಿಯಾದವು. ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಎಚ್ಚೆತ್ತು ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಸ್ಥಳೀಯರ ಸಮಯಪ್ರಜ್ಞೆಯಿಂದ ಹತ್ತಿರದ ಅಂಗಡಿಗಳಿಗೆ ಬೆಂಕಿ ವ್ಯಾಪಿಸುವುದು ತಪ್ಪಿದ್ದು, ಭಾರೀ ಅನಾಹುತದಿಂದ ಪಾರುಗೊಂಡಂತಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರುತ್ತಿದ್ದು, ಅಗ್ನಿ ಅವಘಡಕ್ಕೆ ಕಾರಣ ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.