ವಿಟ್ಲ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ–ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರದಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಮತ್ತು ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಬೈಕ್ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರು ವೀರಕಂಬ ಮೂಲದವರಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ವಿಟ್ಲದ ಮೇಗಿನಪೇಟೆ ನಿವಾಸಿಯದ್ದಾಗಿದ್ದು, ಅದನ್ನು ಹೊರ ರಾಜ್ಯದ ವ್ಯಕ್ತಿ ಚಾಲನೆ ಮಾಡುತ್ತಿದ್ದರೆಂದು ಮಾಹಿತಿ ಲಭ್ಯವಾಗಿದೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.